ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜಿಲ್ಲಾಧಿಕಾರಿಗಳ ಅಧಿಕೃತ ಸರ್ಕಾರಿ ನಿವಾಸದಲ್ಲಿ ನಿರ್ಮಿಸಿದ್ದ ಈಜುಕೊಳ ನಿರ್ಮಾಣ ವಿವಾದಕ್ಕೆ ಸಂಬಂಧಿಸಿದಂತೆ ಮೈಸೂರಿನ ಪ್ರಾದೇಶಿಕ ಆಯುಕ್ತರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.
ಶಾಸಕ ಸಾರಾ ಮಹೇಶ್ ಸರ್ಕಾರಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ವಿಚಾರಣೆಗೆ ನಿರ್ದೇಶಿಸಿತ್ತು.
ಈ ಬಗ್ಗೆ ವಿಚಾರಣೆ ನಡೆಸಿದ ಪ್ರಾದೇಶಿಕ ಆಯುಕ್ತರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.
ವರದಿಯ ವಿವರಗಳು ಹೀಗಿವೆ :
- ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ಈಜು ಕೊಳ ನಿರ್ಮಾಣಕ್ಕೆ ಸಂಬಂಧ ಪಟ್ಟಂತೆ 32 ಲಕ್ಷ ರುಗಳಿಗೆ ಅಂದಾಜುಪಟ್ಟಿಯನ್ನು ತಯಾರಿಸಲಾಗಿದೆ. ಅಂದಾಜುಪಟ್ಟಿಗೆ ತಾಂತ್ರಿಕ ವರ್ಗದವರಿಂದ ಅಥವಾ ಲೋಕೋಪಯೋಗಿ ಇಲಾಖೆಯಿಂದ ಅನುಮೋದನೆ ಪಡೆದಿಲ್ಲ.
- ಈಜುಕೊಳದ ನಿರ್ಮಾಣದ ಬಗ್ಗೆ ಯಾವುದೇ ಪೂರ್ವಭಾವಿ ಆಡಳಿತಾತ್ಮಕ ಮಂಜೂರಾತಿ ಇಲ್ಲ.
- ಈಜುಕೊಳದ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಯಾವುದೇ ಕಾರ್ಯಾದೇಶ ಇಲ್ಲ
- ಕಾಮಗಾರಿ ನಿರ್ವಹಿಸಿದವರ ಒಪ್ಪಂದ ಪತ್ರಗಳು ಇಲ್ಲ.
- ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮೋದನೆ ಪಡೆದಿಲ್ಲ.
ಇತರ ಮಾಹಿತಿಗಳು :
- ಈಜುಕೊಳ ನಿರ್ಮಾಣ ಮಾಡುವ ಮುಂಚೆ ಯಾವುದೇ ಸಭೆಯಲ್ಲಿ ಮಂಡಿಸಿ ಪೂರ್ವ ಅನುಮೋದನೆ ಪಡೆದಿರುವುದಿಲ್ಲ.
- ನಿರ್ಮಿತಿ ಕೇಂದ್ರ, ಮೈಸೂರು ಇವರು ಈಜುಕೊಳ ನಿರ್ಮಾಣ ಮಾಡಲು ರೂ.32,55,131-49 ಗಳಿಗೆ ಅಂದಾಜು ಪಟ್ಟಿಯನ್ನು ತಯಾರಿಸಿರುತ್ತಾರೆ.
- ನಿರ್ಮಿತಿ ಕೇಂದ್ರದಿಂದ ಸಲ್ಲಿಸಿರುವ ಬಿಲ್‍ನಂತೆ ಈಜುಕೊಳ ನಿರ್ಮಾಣದ ನಂತರ ಅಂತಿಮವಾಗಿ 28 ಲಕ್ಷ ರೂ. ವೆಚ್ಚವಾಗಿದೆ.
- ಈಜುಕೊಳ ನಿರ್ಮಾಣದ ಕಾಮಗಾರಿ ದಿನಾಂಕ 2020ರ ಡಿಸೆಂಬರ್ 31ರಂದು ಪ್ರಾರಂಭಿಸಿ 2021ರ ಫೆಬ್ರವರಿ 26 ಮುಕ್ತಾಯಗೊಳಿಸಲಾಗಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ