ನಾಡಪ್ರಭು ಕೆಂಪೇಗೌಡರ ಕೈಯಲ್ಲಿ 4000 ಕೆಜಿ ತೂಕದ ಖಡ್ಗ

Team Newsnap
1 Min Read
International Kempegowda Award announced ಅಂತಾರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರಕಟ

ಬೆಂಗಳೂರಿನ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಆಗಲಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯ ಭಾಗವಾದ 4,000 ಕೆ.ಜಿ. ತೂಕದ ಖಡ್ಗವು ದೆಹಲಿಯಿಂದ ಬೆಂಗಳೂರಿಗೆ ತಲುಪಿದೆ.

ವಿಶೇಷ ಟ್ರಕ್‌ನಲ್ಲಿ ಸೋಮವಾರ ಬೆಂಗಳೂರಿಗೆ ಬಂದ ಈ ಖಡ್ಗವನ್ನು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಬರಮಾಡಿಕೊಂಡರು.

ಈ ವೇಳೆ ಸಚಿವರ ನೇತೃತ್ವದಲ್ಲಿ ಖಡ್ಗಕ್ಕೆ ನೆರೆದಿದ್ದ ಪುರೋಹಿತರು ಸಾಂಪ್ರದಾಯಿಕ ಶಕ್ತಿಪೂಜೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23 ಎಕರೆ ವಿಸ್ತಾರದಲ್ಲಿ ಕೆಂಪೇಗೌಡರ ಸ್ಮರಣಾರ್ಥ ಹೆರಿಟೇಜ್ ಪಾರ್ಕ್ ಅಸ್ತಿತ್ವಕ್ಕೆ ಬರಲಿದ್ದು, ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಇಲ್ಲಿ ತಲೆ ಎತ್ತಲಿರುವ ಕೆಂಪೇಗೌಡರ ಭವ್ಯ ಪ್ರತಿಮೆಗೆ 85 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ. ನೋಯ್ಡಾದ ಪದ್ಮಭೂಷಣ ಪುರಸ್ಕೃತ ಶಿಲ್ಪಿಗಳಾದ ರಾಮ್ ವಾನಜಿ ಸುತರ್ ಈ ಪ್ರತಿಮೆಯನ್ನು ಮಾಡಿಕೊಡುತ್ತಾರೆ ಎಂದರು.

ಕೆಂಪೇಗೌಡರು ಕೈಯಲ್ಲಿ ಹಿಡಿದಿರುವ ಖಡ್ಗವು ಕ್ಷಾತ್ರಬಲವನ್ನು ಪ್ರತಿನಿಧಿಸುತ್ತಿದೆ ನವಭಾರತಕ್ಕೊಂದು ಸಂಕೇತವಾಗಿದೆ. ವಿಮಾನ ನಿಲ್ದಾಣದ ಮೂಲಕ ಹೋಗುವವರು ಮತ್ತು ಇಲ್ಲಿಗೆ ಆಗಮಿಸುವ ಪ್ರತಿಯೊಬ್ಬರು ಕೆಂಪೇಗೌಡರ ಬೃಹದಾಕಾರದ ಪ್ರತಿಮೆಯ ನೋಟದಿಂದ ಒಂದು ದಿವ್ಯ ಅನುಭೂತಿಯನ್ನು ಪಡೆದುಕೊಳ್ಳುವಂತಿರಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದೆ,” ಎಂದು ಸಚಿವ ಅಶ್ವತ್ಥ ನಾರಾಯಣ ಬಣ್ಣಿಸಿದರು.

Share This Article
Leave a comment