ತಹಶೀಲ್ದಾರ್ ಕೋರ್ಟ್‌ಗೆ ವಿಚಾರಣೆಗೆ ಬಂದಿದ್ದವರ ಮೇಲೆ ತಹಶೀಲ್ದಾರ್ ಸೇರಿ 5 ಜನ ಹಲ್ಲೆ ನಡೆಸಿದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.
ತಹಶೀಲ್ದಾರ್ ನವೀನ್ ಹುಲ್ಲೂರ ಹಲ್ಲೆ ಮಾಡಿದ ಆರೋಪಿ.
ನವಲಗುಂದ ತಾಲೂಕ್ ತಹಶೀಲ್ದಾರ್ ಹುಲ್ಲೂರ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಕೋರ್ಟ್‌ಗೆ ಮಲ್ಲಿಕಾರ್ಜುನ ಹಂಪಿಹೋಳಿ ಬಂದಿದ್ದರು.
ಈ ವೇಳೆ ಮಲ್ಲಿಕಾರ್ಜುನ ಮೇಲೆ ತಹಶೀಲ್ದಾರ್ ಸೇರಿದಂತೆ 5 ಜನ ಹಲ್ಲೆ ನಡೆಸಿದ್ದಾರೆ. ಜೊತೆಗೆ ಮಲ್ಲಿಕಾರ್ಜುನ ಸಹೋದರ ಸಿದ್ದಲಿಂಗಪ್ಪ ಹಾಗೂ ಆತನ ಸಹೋದರಿಗೂ ತಹಶೀಲ್ದಾರ್ ಬೂಟುಗಾಲಿನಿಂದ ಒದ್ದಿದ್ದರು.
ಹಲ್ಲೆಗೆ ಒಳಗಾದ ಮಲ್ಲಿಕಾರ್ಜುನ ಹಾಗೂ ಸಿದ್ಧಲಿಂಗಪ್ಪನ ವಿರುದ್ಧ ನವಲಗುಂದ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಬಂಧಿಸಿದ್ದರು.
ಆದರೆ ತಹಶೀಲ್ದಾರ್ ಸೇರಿ 5 ಜನ ಮಲ್ಲಿಕಾರ್ಜುನ ಹಾಗೂ ಸಿದ್ಧಲಿಂಗಪ್ಪನಿಗೆ ಹಲ್ಲೆ ಮಾಡಿದವರನ್ನು ವಿಚಾರಣೆಗೆ ಒಳಪಡಿಸದೇ ಹಾಗೆಯೇ ಬಿಟ್ಟು ಕಳುಹಿಸಿದ್ದರು.
ಮಲ್ಲಿಕಾರ್ಜುನ ಸಹೋದರಿ ಗೀತಾ ಹಂಪಿಹೋಳಿ ಬೂಟುಗಾಲಿನಿಂದ ಒದ್ದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಅಲ್ಲದೆ ಈ ಕುರಿತು ಠಾಣೆಯಲ್ಲಿ ತಹಶೀಲ್ದಾರ್ ವಿರುದ್ಧ ದೂರು ಕೊಡಲು ಹೋದಾಗ ಇನ್‌ಸ್ಪೆಕ್ಟರ್ ಧಮ್ಕಿ ಹಾಕಿದ್ದಾರೆ ಎಂದು ಗೀತಾ ಆರೋಪಿಸಿದ್ದಾರೆ.
ಎಸ್‌ಪಿ ಕರೆ ಮಾಡಿದ ನಂತರ ಬೆಳಗಿನ ಜಾವ ಪ್ರಕರಣದ ಕುರಿತು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ