ಅಫ್ಘಾನಿಸ್ತಾನದ ಪೂರ್ವ ಭಾಗದಲ್ಲಿ ಭಾರಿ ಭೂಕಂಪ ಸಂಭವಿಸಿ 1,000ಕ್ಕೂ ಹೆಚ್ಚು ಜನರನ್ನು ಬಲಿಪಡೆದಿದೆ. ಭೂಕಂಪದಿಂದಾಗಿ ಸಾವಿರಾರು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ನೆರವು ನೀಡಲು ಭಾರತ ಮುಂದಾಗಿದ್ದು, ಈಗಾಗಲೇ ತಂಡವೊಂದು ಕಾಬೂಲ್ ತಲುಪಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಈ ಕುರಿತು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ರಿಡ್ಜ್ ಟೆಂಟ್‌ಗಳು, ಸ್ಲೀಪಿಂಗ್ ಬ್ಯಾಗ್ಸ್, ಹೊದಿಕೆಗಳು, ಸ್ಲೀಪಿಂಗ್ ಮ್ಯಾಟ್ ಸೇರಿದಂತೆ ಇತ್ಯಾದಿ ಅಗತ್ಯ ವಸ್ತುಗಳನ್ನು ಅಪ್ಘಾನ್ ಜನತೆಗೆ ನೆರವಿಗಾಗಿ ರವಾನಿಸಲಾಗಿದೆ. ಪರಿಹಾರ ಸರಕನ್ನು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯ ಕಚೇರಿ (UNOCHA) ಮತ್ತು ಕಾಬೂಲ್‌ನಲ್ಲಿರುವ ಅಫ್ಘಾನ್ ರೆಡ್ ಕ್ರೆಸೆಂಟ್ ಸೊಸೈಟಿ (ARCS)ಗೆ ಹಸ್ತಾಂತರಿಸಲಾಗುವುದು.ಇದನ್ನು ಓದಿ –ರೈತನ ಮಗನಿಗೆ PSI ಕೆಲಸ – 30 ಲಕ್ಷ ರೂಪಾಯಿ ಪಂಗನಾಮ
ಜೂನ್ 22, 2022 ರಂದು ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟರು, ಸಾವಿರಾರು ಮಂದಿ ತೊಂದರೆಗೆ ಸಿಲುಕಿದ್ದಾರೆ. ಸಂತ್ರಸ್ತರಿಗಾಗಿ ಭಾರತ ಸರ್ಕಾರವು ಎರಡು ವಿಮಾನಗಳಲ್ಲಿ 27 ಟನ್ ತುರ್ತು ಪರಿಹಾರ ರವಾನಿಸಿದೆ ಎಂದು MEA ತಿಳಿಸಿದೆ.
ಸಂಕಷ್ಟಕ್ಕೆ ಸಿಲುಕಿರುವ ಆಫ್ಘನ್ನರ ರಕ್ಷಣೆಗೆ ರಾಜತಾಂತ್ರಿಕರು ಮತ್ತು ತಾಂತ್ರಿಕ ತಂಡವನ್ನು ಕಾಬೂಲ್‌ನಲ್ಲಿರುವ ರಾಯಭಾರಿ ಕಚೇರಿಗೆ ಕಳುಹಿಸಿರುವ ಭಾರತದ ನಿರ್ಧಾರ ಸ್ವಾಗತಾರ್ಹ ಎಂದು ತಾಲಿಬಾನ್ ವಕ್ತಾರ ಅಬ್ದುಲ್ ಕಹರ್ ಬಾಲ್ಚಿ ತಿಳಿಸಿದ್ದಾರೆ.ಅಫ್ಘಾನಿಸ್ತಾನಕ್ಕೆ ಮಾನವೀಯ ಸಹಾಯ ಒದಗಿಸಲು ತನ್ನ ತಾಂತ್ರಿಕ ತಂಡವನ್ನು ಕಳುಹಿಸಿದ ಭಾರತದ ನಿರ್ಧಾರವನ್ನು ತಾಲಿಬಾನ್ ಸ್ವಾಗತಿಸಿದೆ.
- ಬೆಳ್ಳೂರು ಸಮೀಪ ಸಾರಿಗೆ ಬಸ್ ಗೆ ಕಾರು ಢಿಕ್ಕಿ : ನಾಲ್ವರ ಸಾವು
- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ