ತಮಿಳುನಾಡು : ಪಟಾಕಿ ಗೋದಾಮು ಸ್ಪೋಟ – 9ಮಂದಿ ದುರ್ಮರಣ

Team Newsnap
1 Min Read

ತಮಿಳುನಾಡು – ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಕಟ್ಟಡ ಕುಸಿದು 9 ಮಂದಿ ದುರ್ಮರಣಕ್ಕೀಡಾಗಿದ್ದಾರೆ, 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಜರುಗಿದೆ

ಮೃತರನ್ನು ಪಟಾಕಿ ಗೋದಾಮಿನ ಮಾಲೀಕ ರವಿ, ಅವರ ಪತ್ನಿ ಜಯಶ್ರೀ, ಪುತ್ರಿ ರುತಿಕ್ಕ ಮತ್ತು ಮಗ ರುತೀಶ್ ಎಂದು ಗುರುತಿಸಲಾಗಿದೆ. ಅಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ- ಇಲ್ಲಿ ಕ್ಯಾಮೆರಾ, ಕ್ಯಾಮೆರಾ ಅಂತ ಹೊಡ್ಕೋತ್ತಾರೆ – ಇಬ್ರಾಹಿಂ

ಗೋದಾಮಿನ ಬಳಿ ರೆಸ್ಟೋರೆಂಟ್ ನಡೆಸುತ್ತಿದ್ದ ರಾಜೇಶ್ವರಿ, ವೆಲ್ಡಿಂಗ್ ಶಾಪ್ ಹೊಂದಿದ್ದ ಇಬ್ರಾಹಿಂ ಮತ್ತು ಇಬ್ರಾಹಿಂ, ವಾಟರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸರಸು ಮತ್ತು ಜೇಮ್ಸ್ ಕೂಡ ಪ್ರಾಣ ಕಳೆದುಕೊಂಡಿದ್ದಾರೆ.

ಶನಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ದಾರುಣ ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಇದೀಗ ಕುಸಿದ ಕಟ್ಟಡದೊಳಗೆ ಸಿಲುಕಿರುವ ಜನರನ್ನು ರಕ್ಷಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬೆಂ- ಮೈ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಗುಂಡ್ಲುಪೇಟೆಯ ಯುವ ಕಲಾವಿದ ಸಾವು

ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುತ್ತಿದ್ದಾರೆ. ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಕೃಷ್ಣಗಿರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ.

WhatsApp Image 2023 07 21 at 9.21.34 PM

ತಮಿಳುನಾಡು

Share This Article
Leave a comment