ಮುಂಬೈನ ವಸೈ ವೆಸ್ಟ್‌ನಲ್ಲಿ ನೆಕ್ಸಾನ್ ಇವಿ ಕಾರು ಬೆಂಕಿಗೆ ಆಹುತಿಯಾಗಿರೋ ಬಗ್ಗೆ ವರದಿಯಾಗಿದೆ. ಭಾರತದಲ್ಲಿ ಎಲೆಕ್ಟ್ರಿಕ್ ಕಾರೊಂದು ಹೊತ್ತಿ ಉರಿದಿರೋದು ಇದೇ ಮೊದಲು. ದುರ್ಘಟನೆ ಬಗ್ಗೆ ಆತಂಕ ವ್ಯಕ್ತಪಡಿಸಿರೋ ಸಂಸ್ಥೆ, ಬೆಂಕಿ ಹೊತ್ತಿಕೊಂಡಿದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಸುತ್ತಿದೆ.
ಇದನ್ನು ಓದಿ –ಮದುವೆ ಮೆರವಣಿಗೆ ವೇಳೆ ಖುಷಿಗೆ ಗುಂಡು ಹಾರಿಸಿದ ವರ : ಸ್ನೇಹಿತ ಸಾವು
ವಾಹನ ಮತ್ತದರ ಬಳಕೆದಾರರ ಸುರಕ್ಷತೆ ಕಾಪಾಡುವಲ್ಲಿ ನಾವು ಬದ್ಧರಾಗಿದ್ದೇವೆ ಎಂದಿರೋ ಸಂಸ್ಥೆ, ಸಂಪೂರ್ಣ ತನಿಖೆ ಬಳಿಕ ಘಟನೆಗೆ ಸಂಬಂಧಪಟ್ಟ ಮತ್ತಷ್ಟು ವಿವರ ನೀಡುವುದಾಗಿ ತಿಳಿಸಿದೆ.
ಮೂಲಗಳ ಪ್ರಕಾರ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಮಾಲೀಕ ತನ್ನ ಕಚೇರಿಯಲ್ಲಿ ಹಾಕಿದ್ದ ಸ್ಲೋ ಚಾರ್ಜರ್ ಮೂಲಕವೇ ಕಾರನ್ನು ಚಾರ್ಜ್ ಮಾಡಿದ್ದ. ಕೆಲಸ ಮುಗಿಸಿಕೊಂಡು ಸಂಜೆ ಕಚೇರಿಯಿಂದ ಹೊರಟಿದ್ದಾನೆ. ಸುಮಾರು 5 ಕಿಮೀ ದೂರ ಹೋಗುವಷ್ಟರಲ್ಲಿ ವಾರ್ನಿಂಗ್ ಬರಲು ಶುರುವಾಗಿದೆ. ಡ್ಯಾಶ್ ಬೋರ್ಡ್ ಮೂಲಕ ಬೆಂಕಿ ಕಿಡಿ ಕಾಣಿಸಿಕೊಂಡಿತ್ತು. ಕೂಡಲೇ ಅಲರ್ಟ್ ಆದ ಆತ ಕಾರಿನಿಂದ ಕೆಳಕ್ಕಿಳಿದಿದ್ದಾನೆ.
ಕ್ಷಣಮಾತ್ರದಲ್ಲಿ ಕಾರು ಹೊತ್ತಿ ಉರಿದಿದೆ. ಅಗ್ನಿಶಾಮಕ ಸಿಬ್ಬಂದಿ ಬಳಿಕ ಬೆಂಕಿ ಆರಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನೆಕ್ಸಾನ್ ಎಲೆಕ್ಟ್ರಿಕ್ ಕಾರುಗಳು ಭಾರತದಲ್ಲಿವೆ. ಸುಮಾರು 30 ಸಾವಿರ ವಾಹನಗಳು ಮಾರಾಟವಾಗಿವೆ. ಆದರೆ ಇಂತಹ ದುರ್ಘಟನೆ ನಡೆದಿರುವುದು ಇದೇ ಮೊದಲು ಎಂದು ಕಂಪನಿ ಹೇಳಿಕೊಂಡಿದೆ.
ಟಾಟಾ ನೆಕ್ಸಾನ್ ಇವಿ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಎಲೆಕ್ಟ್ರಿಕ್ ಕಾರು. ಪ್ರತಿ ತಿಂಗಳು ಕನಿಷ್ಠ 2,500-3,000 ಕಾರುಗಳು ಮಾರಾಟವಾಗುತ್ತಿವೆ. ಕಂಪನಿಯು ಇಲ್ಲಿಯವರೆಗೆ 30,000 ನೆಕ್ಸಾನ್ ಇವಿ ಗಳನ್ನು ಮಾರಾಟ ಮಾಡಿದೆ.
ಈ ಹಿಂದೆಯೂ ಬ್ಯಾಟರಿ ಸ್ಫೋಟದಿಂದಾಗಿ ಹಲವಾರು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಬೆಂಕಿಗೆ ಆಹುತಿಯಾಗಿರೋ ಘಟನೆಗಳು ನಡೆದಿವೆ. ಓಲಾ ಎಲೆಕ್ಟ್ರಿಕ್, ಪ್ಯೂರ್ ಇವಿ, ಜಿತೇಂದ್ರ ಇವಿ ಟೆಕ್, ಅಥರ್ ಎನರ್ಜಿ ಮತ್ತು ಓಕಿನಾವಾ ಮುಂತಾದ ಇವಿ ತಯಾರಕರ ಬಗ್ಗೆ ಸರ್ಕಾರವೂ ತನಿಖೆ ಕೈಗೆತ್ತಿಕೊಂಡಿದೆ. ದ್ವಿಚಕ್ರ ವಾಹನಗಳ ಬೆನ್ನಲ್ಲೇ ಎಲೆಕ್ಟ್ರಿಕ್ ಕಾರು ಕೂಡ ಬೆಂಕಿಗೆ ಆಹುತಿಯಾಗಿರೋದು ಆತಂಕ ಮೂಡಿಸಿದೆ.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ