February 15, 2026

Newsnap Kannada

The World at your finger tips!

nirmala sitaram

ಮಧ್ಯಮ ವರ್ಗಕ್ಕೆ ಶುಭವಾರ್ತೆ: 12 ಲಕ್ಷ ರೂ. ಆದಾಯದವರೆಗೆ ತೆರಿಗೆ ವಿನಾಯಿತಿ

Spread the love

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2025-26ನೇ ಸಾಲಿನ ಆಯವ್ಯಯವನ್ನು ಮಂಡಿಸಿದ್ದು, ಮಧ್ಯಮ ವರ್ಗದ ಜನತೆಗೆ ಮಹತ್ವದ ಘೋಷಣೆ ಮಾಡಿದ್ದಾರೆ.

ಬಜೆಟ್ ಭಾಷಣದಲ್ಲಿ ಅವರು 12 ಲಕ್ಷ ರೂ. ಆದಾಯದವರೆಗೆ ಯಾವುದೇ ಆದಾಯ ತೆರಿಗೆ ವಿಧಿಸಲಾಗುವುದಿಲ್ಲ ಎಂದು ಘೋಷಿಸಿದ್ದಾರೆ. ಇದು ಹಲವು ಉದ್ಯೋಗಸ್ಥರು ಮತ್ತು ಸ್ವಯಂ ಉದ್ಯೋಗಿಗಳಿಗೆ ದೊಡ್ಡ ಅನುಕೂಲ ಒದಗಿಸಲಿದೆ.

ಮಧ್ಯಮ ವರ್ಗದ ಜನರ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟು ಈ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನು ಓದಿ –ಕೇಂದ್ರ Budget 2025 : 120 ಹೊಸ ವಿಮಾನ ನಿಲ್ದಾಣಗಳ ಸ್ಥಾಪನೆ, ಪ್ರಯಾಣಿಕರಿಗೆ ಸುಲಭ ಸಂಚಾರ

ಈ ನಿರ್ಧಾನದೊಂದಿಗೆ ಹೆಚ್ಚುವರಿ ಉಳಿತಾಯದ ಅವಕಾಶ ಲಭ್ಯವಗುತ್ತಿದ್ದು, ಖರೀದಿ ಸಾಮರ್ಥ್ಯ ಹೆಚ್ಚುವ ನಿರೀಕ್ಷೆಯಿದೆ ಎಂದು ಆರ್ಥಿಕ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ.

error: Content is protected !!