SSLC ಪರೀಕ್ಷೆಯಲ್ಲಿ ಹೆಚ್ಚು ಅಂಕಗಳು ಬರುವಂತೆ ಮಾಡುತ್ತೇನೆ ಎಂದು ವಿದ್ಯಾರ್ಥಿನಿ ಜೊತೆ ದೈಹಿಕ ಶಿಕ್ಷಕನೊಬ್ಬಅಸಭ್ಯವಾಗಿ ವರ್ತಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಪರಮೇಶ್ ಐರಣಿ (45) ಆರೋಪಿ. ಈತ 16 ವರ್ಷದ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ.
ಪರಮೇಶ್, ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕನಾಗಿದ್ದನು. ಶಿಕ್ಷಕನ ವಿರುದ್ಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ
ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭವಾದಾಗಿನಿಂದ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಶಿಕ್ಷಕ. ವಿದ್ಯಾರ್ಥಿನಿ ಪರೀಕ್ಷೆ ಬರೆಯುತ್ತಿದ್ದ ಪರೀಕ್ಷಾ ಕೇಂದ್ರದ ಸುಪರ್ ವೈಸರ್ ಆಗಿದ್ದ ಶಿಕ್ಷಕ ಪರಮೇಶ್. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹೆಚ್ಚಿಗೆ ಅಂಕಗಳು ಬರುವಂತೆ ಮಾಡುತ್ತೇನೆಂದು, ವಿದ್ಯಾರ್ಥಿನಿ ಕೆನ್ನೆಗೆ ಮುತ್ತುಕೊಟ್ಟು ಅಸಭ್ಯವಾಗಿ ವರ್ತಿಸಿದ್ದನು. ಏಪ್ರೀಲ್ 8ರಂದು ನಡೆದಿದ್ದ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು