ಶಿಕ್ಷಕರ ನೇಮಕಾತಿ ಹಗರಣ – WB ಟಿಎಂಸಿ ಸಚಿವ ಪಾರ್ಥ ಚಟರ್ಜಿ ಬಂಧನ

Team Newsnap
1 Min Read

ಪಶ್ಚಿಮ ಬಂಗಾಳದಲ್ಲಿ(WB) ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯ ಇಂದು ಬಂಧಿಸಿದೆ.

ಗ್ರೂಪ್ ಸಿ ಮತ್ತು ಡಿ ಸಿಬ್ಬಂದಿ, 9 ರಿಂದ 12ನೇ ತರಗತಿಗಳ ಸಹಾಯಕ ಶಿಕ್ಷಕರು ಹಾಗೂ ಪ್ರಾಥಮಿಕ ಶಿಕ್ಷಕರ ನೇಮಕಾತಿ ಹಗರಣದ ಬಗ್ಗೆ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿತ್ತು.

ಈ ನಿರ್ದೇಶನದ ಮೇರೆಗೆ ನಿನ್ನೆ ಚಟರ್ಜಿ ಮನೆ ಮೇಲೆ ದಾಳಿ ನಡೆಸಿದ್ದ ಇ.ಡಿ ಇಂದು ಬಂಧನಕ್ಕೊಳಪಡಿಸಿದೆ. ನಾಪತ್ತೆಯಾಗಿದ್ದ ಗಿಣಿ ಪತ್ತೆ : ಹುಡುಕಿಕೊಟ್ಟವರಿಗೆ 85 ಸಾವಿರ ರೂಪಾಯಿ ಬಹುಮಾನ

ಪ್ರಸ್ತುತ ಕೈಗಾರಿಕಾ ಮತ್ತು ವಾಣಿಜ್ಯ ಸಚಿವರಾಗಿರುವ ಪಾರ್ಥ ಚಟರ್ಜಿ ಅವರು ಈ ಹಿಂದೆ ಶಿಕ್ಷಣ ಸಚಿವರಾಗಿದ್ದಾಗ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದಿಂದ (WBSSC) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ರಮ ನೇಮಕಾತಿಗಳನ್ನು ಮಾಡಿರುವುದಾಗಿ ಆರೋಪಿಸಲಾಗಿದೆ.

ನಿನ್ನೆಯಷ್ಟೇ ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮನೆ ಮೇಲೆ ದಾಳಿ ನಡೆಸಿ, 20 ಕೋಟಿ ರೂ. ಹಣವನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿತ್ತು.

Share This Article
Leave a comment