ಗುರು ಬ್ರಹ್ಮ ಗುರು ವಿಷ್ಣು|
ಗುರು ದೇವೋ ಮಹೇಶ್ವರಃ||
ಗುರು ಸಾಕ್ಷಾತ್ ಪರಬ್ರಹ್ಮ|
ತಸ್ಮೈ ಶ್ರೀ ಗುರವೇ ನಮಃ||
ಮಕ್ಕಳಿಗೆ ಸ್ಫೂರ್ತಿ ತುಂಬಿ ಸಮಾಜದ ಉತ್ತಮ ನಾಗರಿಕರನ್ನಾಗಿ ರೂಪಿಸುವವರು ಶಿಕ್ಷಕರು, ಮಕ್ಕಳಿಗೆ ಜೀವನದ ಭದ್ರ ಬುನಾದಿ ಹಾಕಿಕೊಡುವವರು ಶಿಕ್ಷಕರು, ಪ್ರತಿ ವ್ಯಕ್ತಿಯು ತಮ್ಮ ಜೀವನದಲ್ಲಿ ತಂದೆ ತಾಯಿಯ ನಂತರದ ಸ್ಥಾನವನ್ನು ಗುರುವಿಗೆ ನೀಡುತ್ತಾರೆ.
“ನಮಗಾಗಿ ಯೋಚಿಸಲು ನಮಗೆ ಸಹಾಯ ಮಾಡುವವರೇ ನಿಜವಾದ ಶಿಕ್ಷಕರು.”
ಡಾ. ಸರ್ವಪಲ್ಲಿ ರಾಧಾಕೃಷ್ಣನ್
ಶಿಕ್ಷಕರ ದಿನಾಚರಣೆಯನ್ನು ಪ್ರತಿ ವರ್ಷ ಸಪ್ಟೆಂಬರ್ 5 ರಂದು ಆಚರಿಸಲಾಗುತ್ತದೆ. ಇಂದು ಶಿಕ್ಷಕರಿಗೆ ಗೌರವ, ಅಭಿನಂದನೆ, ಶುಭಹಾರೈಕೆ ಹೇಳುವ ದಿನ, ಶಿಕ್ಷಕ, ವಿದ್ವಾಂಸ ಮತ್ತು ತತ್ವಜ್ಞಾನಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ. ರಾಧಾಕೃಷ್ಣನ್ ಅವರು ದೇಶದ ಮೊದಲ ಉಪ ರಾಷ್ಟ್ರಪತಿ ಹಾಗೂ ಎರಡನೇ ರಾಷ್ಟ್ರಪತಿಯೂ ಹೌದು. ರಾಧಾಕೃಷ್ಣನ್ ಜನ್ಮದಿನವನ್ನು ಶಿಕ್ಷಕರ ದಿನ ಎಂದು ದೇಶದ ಎಲ್ಲೆಡೆ ಆಚರಿಸಲಾಗುತ್ತದೆ.
ದೇಶವನ್ನು ಕಟ್ಟುವಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದ್ದಾಗಿದೆ. ಗುರುಕುಲ ಶಿಕ್ಷಣದಿಂದ ಹಿಡಿದು ಇಂದಿನ ಶಿಕ್ಷಣದವರೆಗೂ ಶಿಕ್ಷಕರು ಮಕ್ಕಳಿಗೆ ಸ್ಫೂರ್ತಿ ತುಂಬಿ ಸಮಾಜದ ಉತ್ತಮ ನಾಗರಿಕರನ್ನಾಗಿ ರೂಪಿಸುವವರು ಶಿಕ್ಷಕರು.
ಶಿಕ್ಷಕರು ಮಕ್ಕಳ ಜೀವನವನ್ನು ರೂಪಿಸಲು ತಮ್ಮನ್ನು ತಾವು ಅರ್ಪಿಸಿಕೊಳ್ಳುತ್ತಾರೆ. ಅವರು ಆತ್ಮವಿಶ್ವಾಸದಿಂದ ಬದುಕನ್ನು ಬಲಪಡಿಸುತ್ತಾರೆ. ಜೀವನದ ಪ್ರತಿಯೊಂದು ಅಂಶಗಳನ್ನು ತಿದ್ದಿ ತೀಡಿ ಮತ್ತು ಜವಾಬ್ದಾರಿ ಕಲಿಸುತ್ತಾರೆ. ವಿದ್ಯಾರ್ಥಿಗಳ ಬದುಕು ಯಾವಾಗಲೂ ಹಸನಾಗಿರಲಿ ಎಂದು ಹಾರೈಸುವ ಅವರ ಪ್ರಯತ್ನಗಳನ್ನು ಗುರುತಿಸುವುದು ಮತ್ತು ಆಚರಿಸುವುದು ಮುಖ್ಯವಾಗಿದೆ.
1962-64 ಅವಧಿಯಲ್ಲಿ ಭಾರತದ ರಾಷ್ಟ್ರಪತಿಗಳಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದರು. ಭಾರತೀಯ ಶಿಕ್ಷಣ ಕ್ಷೇತ್ರಕ್ಕೊಂದು ಅರ್ಥವತ್ತಾದ ಚೌಕಟ್ಟನ್ನು ನೀಡುವ ಮೂಲಕ ಶಿಕ್ಷಣ ಕ್ಷೇತ್ರ, ತತ್ವಜ್ಞಾನ, ದೇಶದ ಅಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದರು , 1962ರಲ್ಲಿ ಇವರ ಶಿಷ್ಯರು ಮತ್ತು ಸ್ನೇಹಿತರು ಸೆಪ್ಟೆಂಬರ್ 5ರಂದು ತಮ್ಮ ಹುಟ್ಟಿದ ದಿನವನ್ನು ಆಚರಿಸಲು ಹೇಳಿದಾಗ ತಮ್ಮ ಶಿಕ್ಷಕ ಹುದ್ದೆಯನ್ನು ಅಪಾರವಾಗಿ ಗೌರವಿಸುತ್ತಿದ್ದ ರಾಧಾಕೃಷ್ಣನ್ ನೀವು ನನ್ನ ಹುಟ್ಟಿದ ದಿನವನ್ನು ಆಚರಿಸುವುದಾದರೆ ಇಂದಿನಿಂದ ಸೆಪ್ಟೆಂಬರ್ 5ನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲು ಹೇಳಿದರು. ಅಂದಿನಿಂದ ಇವರ ಜನ್ಮದಿನವಾದ ಸೆಪ್ಟೆಂಬರ್ 5ರಂದು ಪ್ರತಿವರ್ಷ ಶಿಕ್ಷಕರ ದಿನವಾಗಿ ಆಚರಿಸಲಾಗುತ್ತದೆ.
ಸಿಇಟಿ ರ್ಯಾಂಕ್ ಪಟ್ಟಿ ರದ್ದು : ಹೈಕೋರ್ಟ್ ಮಹತ್ವದ ಆದೇಶ
1952 ರಲ್ಲಿ ಭಾರತದ ಮೊತ್ತಮೊದಲ ಉಪರಾಷ್ಟ್ರಪತಿಯಾಗಿ ನೇಮಕಗೊಂಡ ರಾಧಾಕೃಷ್ಣನ್ , ರಾಜ್ಯಸಭೆಯಲ್ಲಿ ಸಂಸ್ಕೃತ ಶ್ಲೋಕಗಳ ಮೂಲಕ ಎಲ್ಲ ಗಮನ ಸೆಳೆಯುತ್ತಿದ್ದರು. ಭಾರತ ಸರಕಾರ ಉಪರಾಷ್ಟ್ರಪತಿ ಹುದ್ದೆಯಲ್ಲಿದಾಗಲೇ ಅವರಿಗೆ 1954 ರಲ್ಲಿ ಪ್ರತಿಷ್ಠಿತ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿತು. ಡಾ. ರಾಜೇಂದ್ರ ಪ್ರಸಾದ್ ನಂತರ, 1962 ರಲ್ಲಿ ಭಾರತದ ಎರಡನೇ ರಾಷ್ಟ್ರಪತಿಯಾಗಿ ಆಯ್ಕೆಯಾದ ರಾಧಾಕೃಷ್ಣನ್, ತಮ್ಮ ಅಧಿಕಾರಾವಧಿಯಲ್ಲಿ ದೇಶದ ಸರ್ವತೋಮುಖ ಏಳಿಗೆಗೆ ಅವಿರತ ಶ್ರಮಿಸಿದರು.
ಶಿಕ್ಷಕರ ದಿನಾಚರಣೆ 2022, ಶಿಕ್ಷಕರ ದಿನಾಚರಣೆ
More Stories
“ಸ್ತ್ರೀ ಶಕ್ತಿ”
ಮನೆತನದ ಜೀವ ಮನುಜಕುಲದ ದೈವ
ಮಾನಿನಿಯ ಮನದ ಧ್ವನಿ