ಮಾಹಿತಿ ತಂತ್ರಜ್ಞಾನ ನೀತಿಗೆ ಸಂಪುಟ ಒಪ್ಪಿಗೆ – ಮುಂದಿನ 5 ವರ್ಷ ಗಳಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ

Team Newsnap
1 Min Read

ಬೆಂಗಳೂರು, ಸೆ.4:

ಮುಂದಿನ 5 ವರ್ಷ ಗಳಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿಯೊಂದಿಗೆ ನೂತನ ಮಾಹಿತಿ ತಂತ್ರಜ್ಞಾನ ನೀತಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎಲೆಕ್ಟ್ರಾನಿಕ್ ಮತ್ತು ಸೆಮಿಕಂಡಕ್ಟರ್ ಉಪಕರಣಗಳ ಉತ್ಪಾದನೆ ಉದ್ಯಮ ಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಲು ಹಲವು ರಿಯಾಯಿತಿಗಳನ್ನೂ ಪ್ರಕಟಿಸಿದೆ. ಈ ಉದ್ಯಮಗಳ ಕ್ಷೇತ್ರದಲ್ಲಿ ಬಂಡವಾಳ ಹೂಡಲು ಭೂಮಿ ಖರೀದಿ, ಯಂತ್ರೋಪಕರಣಗಳ ಖರೀದಿಗೆ ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿದರು. ಉದ್ಯಮ ಕಾರ್ಯಾರಂಭ ಮಾಡಿದಂದಿನಿಂದ 5 ವರ್ಷ ಈ ಅನುಕೂಲ ಪಡೆಯಬಹುದು ಎಂದು ಹೇಳಿದರು. 

Share This Article
Leave a comment