March 13, 2026

Newsnap Kannada

The World at your finger tips!

ramya thejasvi

ತೇಜಸ್ವಿ ಸೂರ್ಯನ ಬುರುಡೆಯಲ್ಲಿ ಮೆದುಳೇ ಇಲ್ಲ – ನಟಿ ರಮ್ಯಾ

Spread the love

ಸಂಸದ ತೇಜಸ್ವಿ ಸೂರ್ಯ ಎಂಬ ಮನುಷ್ಯನ ಬುರುಡೆಯಲ್ಲಿ ಮೆದುಳು ಇಲ್ಲ ಎಂದು ಮಾಜಿ ಸಂಸದೆ , ನಟಿ ರಮ್ಯಾ ಕುಟುಕಿದ್ದಾರೆ.

ತಮ್ಮ ಇನ್​ಸ್ಟಾಗ್ರಾಂ ನಲ್ಲಿ, ಈ ಕುರಿತಂತೆ ಪ್ರತಿಕ್ರಿಯೆ ನೀಡಿದ ರಮ್ಯಾ , ಸೂರ್ಯ ಫೋಟೋವನ್ನು ಹಂಚಿಕೊಂಡು ಕ್ಯಾಪ್ಷನ್​ ಹಾಕಿದ್ದಾರೆ. ಸಂಸದ ತೇಜಸ್ವಿ ಸೂರ್ಯನ ಬುರುಡೆಯಲ್ಲಿ ಮೆದುಳೇ ಇಲ್ಲ ಎಂದು ನಟಿ ರಮ್ಯಾ ವಾಗ್ದಾಳಿ ಮಾಡಿದ್ದಾರೆ.

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಇತ್ತೀಚೆಗಷ್ಟೇ ಉಡುಪಿಯಲ್ಲಿ ಪರ್ಯಾಯ ಅದಮಾರು ಮಠದ ವಿಶ್ವರೂಪಂ ಕಾರ್ಯಕ್ರಮದಲ್ಲಿ ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು. ಮುಸ್ಲಿಮರು, ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಅಂತ ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು. ಈ ವಿವಾದಾತ್ಮಕ ಹೇಳಿಕೆ ನೀಡಿ, ನಂತರ ಕ್ಷಮೆಯಾಚಿಸಿದ್ದನ್ನು ಸ್ಮರಿಸಬಹುದು.

error: Content is protected !!