ಟಾಲಿವುಡ್ , ನಟ ಮಹೇಶ್ ಬಾಬು ತಂದೆ ಹಿರಿಯ ನಟ ಕೃಷ್ಣ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು, ನಟ, ನಿರ್ಮಾಪಕ, ನಿರ್ದೇಶಕರಾಗಿದ್ದ ಸೂಪರ್ ಸ್ಟಾರ್ ಕೃಷ್ಣ ಹೈದರಾಬಾದ್ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಿಗ್ಗೆ 4 ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ಸ್ಪಪಡಿಸಿದ್ದಾರೆ.
ಟಾಲಿವುಡ್ ನಟ ಮಹೇಶ್ ಬಾಬು ಅವರ ತಾಯಿ, ಕೃಷ್ಣ ಅವರ ಮೊದಲ ಪತ್ನಿ, ಶ್ರೀಮತಿ ಇಂದಿರಾ ದೇವಿ ಅವರು ಸೆಪ್ಟೆಂಬರ್ನಲ್ಲಿ ನಿಧನರಾಗಿದ್ದರು. ಇದಕ್ಕೂ ಮುನ್ನ ಕೃಷ್ಣ ಅವರ ಎರಡನೇ ಪತ್ನಿ ವಿಜಯ ನಿರ್ಮಲಾ ಹಾಗೂ ಮಹೇಶ್ ಬಾಬು ಸಹೋದರ ರಮೇಶ್ ಬಾಬು ಅವರು ಕೂಡ ಕೆಲ ತಿಂಗಳ ಹಿಂದೆಯಷ್ಟೇ ನಿಧನರಾಗಿದ್ದರು.
ಕೃಷ್ಣ ಅವರ ಪೂರ್ಣ ಹೆಸರು ಘಟ್ಟಮನೇನಿ ಶಿವರಾಮಕೃಷ್ಣಮೂರ್ತಿ.. 1942 ಮೇ 31 ರಂದು ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ತೆನಾಲಿಯ ಬುರ್ರಿಪಾಲೆಂ ಎಂಬ ಗ್ರಾಮದಲ್ಲಿ ಜನಿಸಿದ್ದರು. 1970-80ರ ದೇಶದಲ್ಲಿ ತೆಲುಗು ಸಿನಿಮಾ ರಂಗದಲ್ಲಿ ನಾಯಕ ನಟರಾಗಿ ಖ್ಯಾತಿ ಪಡೆದಿದ್ದ ಕೃಷ್ಣ, ನಿರ್ದೇಶಕ, ನಿರ್ಮಾಪಕರಾಗಿಯು ಯಶಸ್ವಿಯಾಗಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್