Trending

ವಿಷ್ಣುವರ್ಧನ್‌ರನ್ನು ಅವಹೇಳನ ಮಾಡಿದ ತೆಲುಗು ವಿಲನ್ – ದೂರು ದಾಖಲಿಸಿದ ಅಭಿಮಾನಿಗಳು!

ಸಾಹಸ ಸಿಂಹ ವಿಷ್ಣುವರ್ಧನ್ ವಿರುದ್ಧ ಇಲ್ಲ ಸಲ್ಲದ ಮಾತುಗಳನ್ನು ಹೇಳಿರುವ
ತೆಲುಗು ಚಿತ್ರರಂಗದ ವಿಲನ್ ವಿಜಯ್ ರಂಗರಾಜು ವಿರುದ್ಧ ವಿಷ್ಣು ಸೇನಾ ಸಮಿತಿ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದೆ.

ಸಂದರ್ಶನದ ವೇಳೆ ವಿಲನ್ ವಿಜಯ ರಂಗರಾಜು ಬೇರೆ ಬೇರೆ ಕಲಾವಿದರ ಜೊತೆ ನಟಿಸಿದ್ದಾಗ ಆದ ಅನುಭವದ ಬಗ್ಗೆ ಮಾತನಾಡಿದ್ದಾರೆ. ವಿಷ್ಣು ಅವರ ಬಗ್ಗೆ ಇಲ್ಲಸಲ್ಲದ್ದು ಹೇಳಿದ್ದಾರೆ ಎನ್ನಲಾಗಿದೆ.

ಸಮಿತಿ ಆ ನಟನ ಹೆಸರನ್ನು ರಿವೀಲ್ ಮಾಡಿಲ್ಲ. ಆದರೆ ಅವರು ವಿಜಯ್ ರಂಗರಾಜು ಎನ್ನಲಾಗಿದೆ. ಕರ್ನಾಟಕ ಫಿಲ್ಮ್ ಚೇಂಬರ್‌ನಲ್ಲಿ ದೂರು ದಾಖಲಾಗಿದೆ. ನಟರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ಈ ಸಮಿತಿ ಸದಸ್ಯರು ಕೆಎಫ್‌ಸಿಸಿ ಉಪಾಧ್ಯಕ್ಷ ಉಮೇಶ್ ಬಣಕಾರ್ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.

ವಿಜಯ್ ರಂಗರಾಜು ಹಿರಿಯ ತೆಲುಗು ನಟರು. 35 ವರ್ಷಗಳಿಂದ ಚಿತ್ರರಂಗದಲ್ಲಿದ್ದಾರೆ. ಅಕ್ಟೋಬರ್‌ನಲ್ಲಿ ನೀಡಿದ ಸಂದರ್ಶನದಲ್ಲಿ ಅವರು ವಿಷ್ಣುವರ್ಧನ್ ಬಗ್ಗೆ ಅಶ್ಲೀಲವಾಗಿ, ನಕಾರಾತ್ಮಕವಾಗಿ ಮಾತನಾಡಿದ್ದಾರೆ ದೂರಿನಲ್ಲಿ ಹೇಳಲಾಗಿದೆ.

ವಾಣಿಜ್ಯ ಮಂಡಳಿಗೆ ದೂರು:

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಉಪಾಧ್ಯಕ್ಷರಾದ ಉಮೇಶ್ ಬಣಕಾರ್ ಅವರೊಡನೆ ಡಾ.ವಿಷ್ಣು ಸೇನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್, ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾದ ಯದುನಂದನ್ ಗೌಡ, ಮಹಿಳಾ ಘಟಕದ ಅಧ್ಯಕ್ಷರಾದ ರಾಧಾ ಗಂಗಾಧರ್, ಉಪಾಧ್ಯಕ್ಷರಾದ ಭಾಗ್ಯರಾಮು, ಹಿರಿಯ ಸೇನಾನಿಗಳಾದ ತುಳಸೀಕೃಷ್ಣ, ಚೆನ್ನಪ್ಪ, ರಾಜೇಂದ್ರ, ವಿಎಸ್ಎಸ್ ನಂದಿನಿ ಬಡಾವಣೆ ಅಧ್ಯಕ್ಷರಾದ ಭಗವಂತ ಮತ್ತು ಇತರೆ ಸೇನಾನಿಗಳಾದ ಸುಕನ್ಯ, ಗಂಗಾಧರ್ ಮುಂತಾದವರು ಸಭೆ ನಡೆಸಿದರು.

ಯಜಮಾನ್ರ ಬಗ್ಗೆ ಅವಹೇಳನಕಾರಿ
ಯಾಗಿ ಮಾತನಾಡಿದ ನಟನೊಬ್ಬನ ಮೇಲೆ ಕ್ರಮ ಜರುಗಿಸುವಂತೆ ಕೋರಲಾಯಿತು.

ಕೈ ಕಟ್ಟಿ ಕೂರುವುದಿಲ್ಲ- ವಿಷ್ಣು ಸೇನೆ:

ಆ ವ್ಯಕ್ತಿ ಯಾರು? ಘಟನೆ ಏನು? ಎಂಬಿತ್ಯಾದಿ ವಿವರಗಳು ಕಾರಣಾಂತರಗಳಿಂದ ಈಗ ಸದ್ಯಕ್ಕೆ ನಿಮ್ಮೊಂದಿಗೆ ಹಂಚಿಕೊಳ್ಳಲಾಗುವುದಿಲ್ಲ. ಆದ್ರೆ ಯಜಮಾನ್ರ ಹಿತಾಸಕ್ತಿಗೆ ದಕ್ಕೆ ಬಂದಾಗ ಕೈಕಟ್ಟಿ ಕೂರುವುದಿಲ್ಲ ಎಂಬುದನ್ನು ಮಾತ್ರ ತಿಳಿಸಲು ಇಚ್ಚಿಸುತ್ತೇವೆ. ಡಾ.ವಿಷ್ಣು ಸೇನಾ ಸಮಿತಿ. ಹೇಳಿದೆ

Team Newsnap
Leave a Comment
Share
Published by
Team Newsnap

Recent Posts

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024