ಮಂಡ್ಯ : ಸಚಿವ ಚಲುವರಾಯಸ್ವಾಮಿ ತುರ್ತು ಸಭೆ ನಡೆಸಿದ್ದು, ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ಗೆ ತಾತ್ಕಾಲಿಕ ತಡೆ ನೀಡಿದ್ದಾರೆ.
ಸರ್ಕಾರ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲು ಮುಂದಾಗಿದ್ದು ರೈತರು ವಿರೋಧ ವ್ಯಕ್ತಪಡಿಸಿದ್ದರು. ಮಂಡ್ಯದ ಜಿಲ್ಲಾಪಂಚಾಯತಿ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ತುರ್ತು ಸಭೆ ನಡೆಸಲಾಗಿದ್ದು ,ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ಗೆ ತಾತ್ಕಾಲಿಕ ತಡೆ ನೀಡಲಾಗಿದೆ.
ಇದನ್ನು ಓದಿ –ವಿದ್ಯಾರ್ಥಿ ಮೊಬೈಲ್ ಚಾರ್ಜ್ ಹಾಕಲು ಹೋಗಿ ದುರ್ಮರಣ
“ಕೇವಲ ಕುಳಿಗಳನ್ನ ಮಾತ್ರ ಕೊರೆಸಲಾಗಿದೆ. ಸಿಎಂ ಜೊತೆ ಸಭೆ ನಡೆಸಿ ತೀರ್ಮಾನ ಮಾಡಲಾಗುತ್ತದೆ. ನಮಗೆ ವೈಯಕ್ತಿಕ ಗಣಿಗಾರಿಕೆ ಮುಖ್ಯವಲ್ಲ ,ಮತ್ತೊಂದು ಡ್ಯಾಮ್ ಕಟ್ಟಲು ಸಾಧ್ಯವಿಲ್ಲ ಎಂದು ಎಲ್ಲರಿಗೂ ತಿಳಿದಿದೆ . ಜಲಾಶಯಕ್ಕೆ ಒಂದು ಸಣ್ಣ ಹಾನಿಯಾಗದಂತೆ ನೋಡಿಕೊಳ್ಳುತ್ತೇವೆ ” ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ