November 2, 2024

Newsnap Kannada

The World at your finger tips!

accident 1

ಚಿತ್ರದುರ್ಗದ ಬಳಿ ಸಾರಿಗೆ ಬಸ್ – ಲಾರಿ ನಡುವೆ ಭೀಕರ ಅಪಘಾತ : 5 ಮಂದಿ ಸಾವು

Spread the love

ಚಿತ್ರದುರ್ಗ:
ಕೆಎಸ್ ಆರ್ ಟಿಸಿ – ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ ಘಟನೆ ಹಿರಿಯೂರಿನ ಗೊಲ್ಲಹಳ್ಳಿಯ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸೋಮವಾರ ಸಂಭವಿಸಿದೆ.

ಈ ನಡುವೆ ಘಟನೆಯಲ್ಲಿ ಐದಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಚಿಕಿತ್ಸೆಗಾಗಿ ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.

ಅಪಘಾತದ ನಂತರ ಲಾರಿಯ ಚಾಲಕ ಲಾರಿಯೊಂದಿಗೆ ಪರಾರಿಯಾಗಿದ್ದಾನೆ. ಐಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮೃತರಲ್ಲಿ ಇಬ್ಬರ ಗುರುತು ಪತ್ತೆಯಾಗಿದೆ. ಅವರನ್ನು ಬೆಂಗಳೂರು ಮೂಲದ ಪಾರ್ವತಮ್ಮ(45) , ಮರಾಯಚೂರಿನ ಮಸ್ಕಿ ಮೂಲದ ರಮೇಶ್(40)‌ ಎಂದು ಹೇಳಲಾಗಿದೆ

ಬಸ್ ಚಳ್ಳಕೆರೆಯಿಂದ ಹಿರಿಯೂರು ಕಡೆಗೆ ಬರುತ್ತಿತ್ತು ಕೆಎಸ್‌ಆರ್ ಟಿಸಿ ಬಸ್ ಗೆ ಹಿಂದೆ ಬಂದ ಲಾರಿ ಓವರ್ ಟೇಕ್ ಮಾಡುವಾಗ ಈ ಅವಘಡ ನಡೆದಿದೆ ಎನ್ನಲಾಗಿದೆ.

ಬೀದರ್ – ಶ್ರೀರಂಗಪಟ್ಟಣ ನಡುವಿನ ಹೆದ್ದಾರಿಯ ಅಗಲೀಕರಣ ಒಂದೆರಡು ವರ್ಷಗಳಿಂದ ನಡೆಯುತ್ತಿದ್ದು, ಹಲವು ಕಡೆಗಳಲ್ಲಿ ಇನ್ನೂ ಕೂಡ ಕಾಮಗಾರಿ ಪೂರ್ಣಗೊಂಡಿಲ್ಲ ಅಂತ ಸ್ಥಳೀಯ ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!