ಬೆಮ್ – ಮೈ ದಶಪತ್ ಹೆದ್ದಾರಿಯಲ್ಲಿ ಭೀಕರ ಅಪಘಾತ – 3 ಸಾವು, 6 ಮಂದಿಗೆ ಗಂಭೀರ ಗಾಯ

Team Newsnap
1 Min Read

ರಾಮನಗರ: ಲಾರಿ ಹಾಗೂ ಟಿಟಿ ವಾಹನ ನಡುವೆ : ಬೆಂಗಳೂರು-ಮೈಸೂರು (Benagaluru-Mysuru) ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘತದಿಂದ (Accident ) 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಮೂವರು ಸಾವನ್ನಪ್ಪಿರುವ ಘಟನೆ ತಡರಾತ್ರಿ ನಡೆದಿದೆ.

ಚನ್ನಪಟ್ಟಣ ತಾಲೂಕಿನ ಚಾಮುಂಡೇಶ್ವರಿ ಆಸ್ಪತ್ರೆ ಬಳಿ ಟಿಟಿ ಲಾರಿಗೆ ಡಿಕ್ಕಿ ಹೊಡೆದಿದ್ದು , ಇದರ ಪರಿಣಾಮ ಟಿಟಿ ವಾಹನ ಸಂಪೂರ್ಣ ನಾಶವಾಗಿದೆ.

ಟಿಟಿ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ 3 ವರು ಮೃತಪಟ್ಟಿದ್ದು, 6 ಮಂದಿ ಗಾಯಾಳುಗಳನ್ನು ಸ್ಥಳೀಯ ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನು ಓದಿ –ಕೆಲಸ ಸಿಕ್ಕಿಲ್ಲವೆಂದು ಪ್ರೀತಿಸಿ ಮದುವೆಯಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

ಮರಣೋತ್ತರ ಪರೀಕ್ಷೆಗೆ ಮೃತದೇಹಗಳನ್ನು ರವಾನಿಸಿ , ಚನ್ನಪಟ್ಟಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share This Article
Leave a comment