February 19, 2026

Newsnap Kannada

The World at your finger tips!

police 1

ಕಲಬುರಗಿಯಲ್ಲಿ ಭೀಕರ ಅಪಘಾತ – ನಾಲ್ವರು ದುರ್ಮರಣ

Spread the love

ಕಲಬುರಗಿ: ತಾಲೂಕಿನ ಹಸನಾಪುರ ಬಳಿ ನಡೆದ ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಬೈಕ್, ಕಾರು ಮತ್ತು ಲಾರಿಯ ನಡುವೆ ಈ ಅಪಘಾತ ಸಂಭವಿಸಿದ್ದು, ಬೈಕ್ ಮತ್ತು ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ರಾಘವೇಂದ್ರ (35), ಮುಜಾಹಿದ್ (30), ಹುಸೇನ್ ಬಿ (45) ಮತ್ತು ಮೌಲಾಬಿ (50) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಬೈಕ್ ಸವಾರ ಪರಮಾನಂದ ಹಾಗೂ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಂಧಗಿಯಿಂದ ಚಿತ್ತಾಪುರಕ್ಕೆ ಹೊರಟಿದ್ದ ಬೈಕ್ ಲಾರಿಗೆ ಡಿಕ್ಕಿ ಹೊಡೆದು, ಲಾರಿ ಚಕ್ರಕ್ಕೆ ಸಿಲುಕಿತು. ಈ ಸಂದರ್ಭ ವೇಗವಾಗಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಇದನ್ನು ಓದಿ –ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಮೃತರು ರಾಯಚೂರು ಜಿಲ್ಲೆಯ ಹಟ್ಟಿ ಗ್ರಾಮಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಘಟನೆ ಸ್ಥಳಕ್ಕೆ ಕಲಬುರಗಿ ಪೊಲೀಸ್ ಆಯುಕ್ತ ಡಾ. ಶರಣಬಸಪ್ಪ ಡಘೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಟ್ರಾಫಿಕ್ 1 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!