ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ

Team Newsnap
1 Min Read

ಹಾಲಿನ ಲಾರಿ ಮತ್ತು ಕಾರಿನ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ.

ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿ ಬಳಿ ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಹಾಲಿನ ಲಾರಿಗೆ ಡಿಕ್ಕಿ ಹೊಡೆದಿದೆ, ಡಿಕ್ಕಿ ಹೊಡೆದ ರಭಸಕ್ಕೆ ಪಕ್ಕದ ರಸ್ತೆಗೆ ಕಾರು ಉರುಳಿದೆ.

ಗಾಯಾಳುಗಳನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‘ ನಮ್ಮ ಕ್ಲಿನಿಕ್ ‘ ಹೊಸ ರೂಪದಲ್ಲಿ : ವೈದ್ಯಕೀಯ ಸೇವೆ ರಾತ್ರಿ 8 ಗಂಟೆವರೆಗೂ ಲಭ್ಯ

ವಾಹನಗಳಿಗೆ ವೇಗಮಿತಿ ನಿಗದಿಪಡಿಸುವ ಜೊತೆಗೆ ಬೈಕ್‌, ಆಟೋ ಟ್ರ್ಯಾಕ್ಟರ್‌ ವಾಹನಗಳಿಗೆ ನಿಷೇಧ ಹೇರಲಾಗಿದೆ.ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ನಿಯಂತ್ರಸಲು ಇತ್ತೀಚೆಗಷ್ಟೇ ಸ್ಪೀಡ್‌ ಡಿಟೆಕ್ಟರ್‌ ಅಳವಡಿಸಲಾಗಿದೆ.

Share This Article
Leave a comment