ರಾಜಧಾನಿ ಬೆಂಗಳೂರು ಭಯಂಕರ ಮಳೆಗೆ ತತ್ತರಿಸಿದೆ. ಮಂಗಳವಾರ ಮಧ್ಯಾಹ್ನದಿಂದಲೇ ಬೆಂಗಳೂರಿನಲ್ಲಿ ಸುರಿಯುತ್ತಿದ್ದ ರಾತ್ರಿ ಎಲ್ಲಾ 100 mm ಮಳೆ ಆಗಿದೆ. ರಾತ್ರಿ ಸುರಿದ ಭಯಂಕರ ಮಳೆಗೆ ಸಿಲಿಕಾನ್ ಸಿಟಿಯ ಮಂದಿ ಕಂಗಾಲಾಗಿದ್ದಾರೆ. ಕೆ.ಆರ್.ಮಾರ್ಕೆಟ್, ಕಾರ್ಪೊರೇಷನ್, ಲಾಲ್ಬಾಗ್, ಶಾಂತಿನಗರ, ಮೆಜೆಸ್ಟಿಕ್, ಕೋರಮಂಗಲ, ಜಯನಗರ, ಮಲ್ಲೇಶ್ವರಂ, ಯಶವಂತಪುರ ಸೇರಿ ಹಲವೆಡೆ ಭಾರೀ ಮಳೆಯಾಗಿದೆ.
ಮಳೆಯಿಂದ ರಸ್ತೆಯಲ್ಲಿ ನೀರು ನಿಂತು ಸಂಚಾರದ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳು ಜಲಾವೃತ
ಹಲವೆಡೆ ಮನೆಗಳಿಗೆ ಮಳೆ ನೀರು ನುಗ್ಗಿದ್ದು ಅಸ್ತವ್ಯಸ್ತಗೊಂಡಿದೆ. ಸತತ ಸುರಿಯುತ್ತಿರುವ ಮಳೆಯಿಂದಾಗಿ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಭಾರಿ ತೊಂದರೆಯಾಗಿದೆ ಕುಮಾರಸ್ವಾಮಿ ಲೇಔಟ್ 14ನೇ ಮುಖ್ಯರಸ್ತೆ, 23ನೇ ಅಡ್ಡ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ.
ಇದನ್ನು ಓದಿ :ಯುವನಟಿ ಚೇತನಾ ಸಾವು; ವೈದ್ಯರಿಗೆ ನೋಟಿಸ್, ವಿಚಾರಣೆಗೆ ಕರೆ..
ಶಾಂತಿನಗರ ಡಬಲ್ ರೋಡ್ ಕೆರೆಯಂತಾಗಿದೆ. ಪರಿಣಾಮ ದ್ವಿಚಕ್ರ ವಾಹನಗಳು, ಆಟೋ ರಿಕ್ಷಾಗಳ ಸಂಚಾರಕ್ಕೆ ಅಡ್ಡಿಯಾಗಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ. ಸಾಕಷ್ಟು ಮರಗಳು ಉರುಳಿವೆ . ರಾಜಕಾಲುವೆ ನೀರು ಉಕ್ಕಿ ಹರಿದು ಮನೆಗಳಿಗೆ ನೀರು ನುಗ್ಗಿದೆ. ಜನರ ಗೋಳು ಹೇಳತೀರದ್ದಾಗಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ