ಹಾವೇರಿ ಬಳಿ ಭೀಕರ ರಸ್ತೆ ಅಪಘಾತ: ಭದ್ರಾವತಿಯ 13 ಮಂದಿ ದುರಂತ ಸಾವು

Team Newsnap
1 Min Read

ಹಾವೇರಿ : ದೇವಸ್ಥಾನಕ್ಕೆ ತೆರಳಿ ಸ್ವಗ್ರಾಮಕ್ಕೆ ವಾಪಸ್ಸು ಆಗುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಟಿಟಿವೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ 13 ಧಾರುಣವಾಗಿ ಸಾವನ್ನಪ್ಪಿದ ಘಟನೆ ಶುಕ್ರವಾರ ಬೆಳ್ಳಂಬೆಳಗ್ಗೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ

ಈ ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿ 13 ಜನ ಮೃತಪಟ್ಟಿದ್ದಾರೆ. 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತಪಟ್ಟವರನ್ನು ಪರಶುರಾಮ್​​(45), ಭಾಗ್ಯ(40), ನಾಗೇಶ(50), ವಿಶಾಲಾಕ್ಷಿ(40), ಅರ್ಪಿತಾ(18), ಸುಭದ್ರಾ ಬಾಯಿ(65), ಪುಣ್ಯ(50), ಮಂಜುಳಾಬಾಯಿ, ಚಾಲಕ ಆದರ್ಶ್(23), ಮಾನಸ(24), ರೂಪಾ(40), ಮಂಜುಳಾ(50) ಎಂದು ಗುರುತಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಂನಹಟ್ಟಿ ಗ್ರಾಮದ ನಿವಾಸಿಗಳಾಗಿದ್ದಾರೆ. ಈ ಘಟನೆಯಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಿಟಿ ವಾಹನದಲ್ಲಿದ್ದ ಒಟ್ಟು 17 ಜನರು ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿರುವಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಒಂಬತ್ತು ಮಹಿಳೆಯರು, ಇಬ್ಬರು ಪುಟ್ಟ ಕಂದಮ್ಮಗಳು, ಇಬ್ಬರು ಗಂಡು ಮಕ್ಕಳು, ಚಾಲಕ ಒಳಗೊಂಡಿದ್ದಾರೆ. ಮೃತ ದೇಹಗಳನ್ನು ಹಾವೇರಿ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ವರ್ಗಾಯಿಸಲಾಗಿದೆ ಎಂದು ಹಾವೇರಿ ಜಿಲ್ಲಾ ಪೊಲೀಸ್​ ವರಿಷ್ಠಾದಿಕಾರಿ ಅಂಶಿಕುಮಾರ್ ತಿಳಿಸಿದ್ದಾರೆ.ರಾಜ್ಯದಲ್ಲಿ ‘ಡೇಂಘಿ’ ಜ್ವರಕ್ಕೆ ಹಾವೇರಿಯಲ್ಲಿ ಮೊದಲ ಬಲಿ

ಬ್ಯಾಡಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಹೆಚ್ಚಿನ ವಿವರ ಕಲೆಹಾಕುತ್ತಿದ್ದಾರೆ.

Share This Article
Leave a comment