ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ : ಗುಂಡೇಟಿಗೆ ಹುತಾತ್ಮರಾದ ಇಬ್ಬರು ಪೊಲೀಸರು

Team Newsnap
0 Min Read

ಜಮ್ಮು ಕಾಶ್ಮೀರದ ಕಣಿವೆಯಲ್ಲಿ ಉಗ್ರರ ಅಟ್ಟಹಾಸದಲ್ಲಿ ಇಂದು ಸಂಜೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸರು ಉಗ್ರರ ಗುಂಡೇಟಿಗೆ ಹುತಾತ್ಮರಾಗಿದ್ದಾರೆ.

ಜಮ್ಮು ಕಾಶ್ಮೀರದ ಪಂಟಾಚೌಕ್​ ಸಮೀಪದ ಜೀವಾನ್ ಪ್ರದೇಶದ​ ಬಳಿ ಪೊಲೀಸ್​ ಬಸ್​ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಅಟ್ಟಹಾಸ ಮೆರೆದಿದ್ದಾರೆ.

ಈ ದಾಳಿಯಲ್ಲಿ 12 ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದು ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

Share This Article
Leave a comment