ಜಮ್ಮು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಚದೂರ್ ಎಂಬ ಪ್ರದೇಶದಲ್ಲಿ ಉಗ್ರರು ಸಿ.ಆರ್.ಪಿ.ಎಫ್. ಯೋಧರ ಮೇಲೆ ಉಗ್ರರು ಮಂಗಳವಾರ ದಾಳಿ ಮಾಡಿದ್ದಾರೆ. ದಾಳಿಯಲ್ಲಿ ಸಿ.ಆರ್.ಪಿ.ಎಫ್. ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯೋಧನನ್ನು ತಕ್ಷಣವೇ ಆಸ್ಪತ್ರಗೆ ಸೇರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಯೋಧ ಅಸುನೀಗಿದ್ದಾರೆ.
ಉಗ್ರರ ದಾಳಿಗೆ ಪ್ರತಿ ದಾಳಿಮಾಡಿದ ಸಿ.ಆರ್.ಪಿ.ಎಫ್. ಯೋಧರು ಒಬ್ಬ ಉಗ್ರನನ್ನು ಕೊಂದಿದ್ದಾರೆ. ಉಳಿದವರು ತಪ್ಪಿಸಿಕೊಂಡಿದ್ದಾರೆ, ಮೃತ ಯೋಧನ ಬಳಿ ಇದ್ದ ರೈಫಲ್ ನ್ನು ತೆಗೆದುಕೊಂಡು ಹೋಗಿದ್ದಾರೆ. ಯೋಧರು ಉಗ್ರರ ಶೋಧನೆಯಲ್ಲಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು