ಎಲ್ಲವೂ ಅಂದುಕೊಂಡಂತೆ ಆದರೆ ಈ ವರ್ಷಾಂತ್ಯದಲ್ಲಿ ಭಾರತದಲ್ಲಿ ಟೆಸ್ಲಾ ಕಂಪನಿಯ ಎಲೆಕ್ಟ್ರಿಕ್ ಕಾರು ಮಾರುಕಟ್ಟೆಗೆ ಬರಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಅಮೆರಿಕದ ಎಲೆಕ್ಟ್ರಿಕ್ ಕಾರು ಉತ್ಪಾದನಾ ಕಂಪನಿಯು ಭಾರತದಲ್ಲಿ ಮಾರಾಟವನ್ನು ಪ್ರಾರಂಭಿಸುತ್ತದೆ. ನಂತರ ಬೇಡಿಕೆಯ ಅನುಸಾರವಾಗಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ತಯಾರಿಕೆಗೆ ಮುಂದಾಗಲಿದೆ ಎಂಬುದಾಗಿ ತಿಳಿಸಿದ್ದಾರೆ.
ಟೆಸ್ಲಾ ಕಂಪನಿ ಬೆಂಗಳೂರಿನಲ್ಲಿ ತನ್ನ ಸಂಶೋಧನಾ ಮತ್ತು ಅಭಿವೃದ್ಧಿ ಘಟಕ ಸ್ಥಾಪಿಸಿದ ಬೆನ್ನಲ್ಲೇ ಯಾವ ಕಾರನ್ನು ಭಾರತದಲ್ಲಿ ಬಿಡುಗಡೆ ಮಾಡಬಹುದು ಎಂಬುದರ ಬಗ್ಗೆ ಈಗ ಚರ್ಚೆ ಬೆನ್ನಲ್ಲೇ ಈ ಪ್ರಕಟನೆ ಹೊರ ಬಿದ್ದಿದೆ.
ಕಳೆದ ವರ್ಷ ಮಾರುಕಟ್ಟೆಯಲ್ಲಿ ಸೂಪರ್ ಹಿಟ್ ಆಗಿರುವ ಮಾಡೆಲ್ 3 ಕಾರನ್ನು ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಬಹುದು ಎಂಬ ವಿಶ್ಲೇಷಣೆ ಈಗ ಕೇಳಿ ಬಂದಿದೆ.
ಕಾರಿನ ಬೆಲೆ 60 ಲಕ್ಷ ರು ?
ಟೆಸ್ಲಾ ಯಾವ ಕಾರನ್ನು ಬಿಡುಗಡೆ ಮಾಡಬಹುದು ಎಂಬುದು ಅಧಿಕೃತವಾಗಿ ಹೇಳಿಲ್ಲ. ಆದರೆ ಮಾಡೆಲ್ 3 ಸೆಡಾನ್ ಕಾರು ಬಿಡುಗಡೆ ಮಾಡಬಹುದು ಎಂದು ನಿರೀಕ್ಷಿಸಲಾಗುತ್ತಿದೆ.
ಈ ಕಾರಿನ ಬೆಲೆ 55 ರಿಂದ 60 ಲಕ್ಷ ಎಂದು ನಿರೀಕ್ಷಿಸಲಾಗಿದ್ದು ಮುಂದಿನ ತಿಂಗಳು ಭಾರತದಲ್ಲಿ ಬುಕ್ಕಿಂಗ್ ಪ್ರಾರಂಭವಾಗುವ ಸಾಧ್ಯತೆಯಿದೆ. ಐಷಾರಾಮಿ ಕಾರುಗಳಿಗೆ ಹೆಸರಾದ ಮರ್ಸಿಡಿಸ್ ಬೆಂಜ್ ಕಾರುಗಳಿಗೆ ಟೆಸ್ಲಾ ಕಂಪನಿಯ ಕಾರುಗಳು ಸ್ಪರ್ಧೆ ನೀಡುತ್ತಿವೆ
ಮಾಡೆಲ್ 3 ವಿಶೇಷತೆ ಏನು ?
ಟೆಸ್ಲಾ ಬಿಡುಗಡೆ ಮಾಡಿದ ಕಾರುಗಳ ಪೈಕಿ ಅತ್ಯಂತ ಒಳ್ಳೆಯ ಮಾದರಿ ಇದಾಗಿದೆ. ಈ ಕಾರನ್ನು 2017ರಲ್ಲಿ ವಿಶ್ವದಲ್ಲಿ ಮೊದಲ ಬಾರಿಗೆ ಪರಿಚಯಿಸಲಾಗಿತ್ತು. ವಿಶ್ವದಲ್ಲೇ ಅತೀ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರು ಎಂಬ ಹೆಗ್ಗಳಿಕೆ ಈ ಕಾರಿಗೆ ಪಡೆದುಕೊಂಡಿದೆ.
ಎರಡು ಮಾದರಿಯಲ್ಲಿ ಮಾಡೆಲ್ 3 ಕಾರು ಬಿಡುಗಡೆಯಾಗಿದೆ. ಲಾಂಗ್ ರೇಂಜ್ ಮಾದರಿಯ ಕಾರು ಒಮ್ಮೆ ಚಾರ್ಜ್ ಮಾಡಿದರೆ 500 ಕಿ.ಮೀ ಕ್ರಮಿಸಿದರೆ, ಸ್ಟಾಡಂರ್ಡ್ ಮಾದರಿಯ ಕಾರು 354 ಕಿ.ಮೀ ಕ್ರಮಿಸುವ ಸಾಮರ್ಥ್ಯವನ್ನು ಹೊಂದಿದೆ. 15 ನಿಮಿಷದಲ್ಲಿ ಶೇ.80 ರಷ್ಟು ಬ್ಯಾಟರಿ ಚಾರ್ಜ್ ಆಗುತ್ತದೆ. ಗರಿಷ್ಟ 162 ಕಿ.ಮೀ ವೇಗದಲ್ಲಿ ಚಲಿಸುವ ಸಾಮರ್ಥ್ಯ ಈ ಕಾರಿಗಿದೆ.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ
ಮೈಸೂರಿನ ಸರ್ಕಾರಿ ಶಾಲೆಯ ಜಾಗ ವಕ್ಫ್ ಆಸ್ತಿಯಾಯ್ತು – ಸಿಎಂಗೆ ಪ್ರತಾಪ್ ಸಿಂಹ ಟಾಂಗ್