ಪಠ್ಯಪುಸ್ತಕ ಪರಿಷ್ಕರಣೆ : ಸಿಎಂ ಸಿದ್ದರಾಮಯ್ಯ ಮಾಹಿತಿ

Team Newsnap
1 Min Read

ಬೆಂಗಳೂರು : ಬಿಜೆಪಿ ಅಧಿಕಾರದ ಅವಧಿಯಲ್ಲಿ ಆಗಿರುವ ಪಠ್ಯ ಪುಸ್ತಕ ಪರಿಷ್ಕರಣೆ ಮಾಡುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ

ಸಿಎಂ ಸಿದ್ದರಾಮಯ್ಯ ಈ ವಿಷಯವನ್ನು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರಿಗೆ ತಿಳಿಸಿ, ಬಿಜೆಪಿ ಅಧಿಕಾರದ ಅವಧಿಯಲ್ಲಿ ಆಗಿರುವ ಪಠ್ಯ ಪುಸ್ತಕ ಪರಿಷ್ಕರಣೆ ಮಾಡುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದರು.

ಜನರಿಗೆ ಸರ್ಕಾರಿ ಯೋಜನೆಗಳನ್ನು ತಲುಪಿಸಲು ಕ್ರಮವಹಿಸಿ ಸರ್ಕಾರದ ಯೋಜನೆಗಳನ್ನು ನಿಗಧಿತ ಕಾಲಾವಧಿಯೊಳಗೆ ಅನುಷ್ಠಾನಗೊಳಿಸಿ, ಪಾರದರ್ಶಕ ಆಡಳಿತ ನೀಡಲು ಅಧಿಕಾರಿಗಳ ಸಹಕಾರ ಕೋರಿದ್ದೇವೆ ಎಂದರು.

ಬೆಂಗಳೂರಿನಲ್ಲಿ ಮಳೆಯಾದಾಗ ಅಂಡರ್ ಪಾಸ್ ನಲ್ಲಿ ಸಂಚಾರ ಬಂದ್ ಮಾಡಿ ಎಂದು ಮಾಹಾನಗರ ಪಾಲಿಕೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.ಮುಂಗಾರು ಪೂರ್ವ ಮಳೆಯಿಂದ ಹಾನಿ: ಬೆಳೆ ರಕ್ಷಣೆಗೆ ಕ್ರಮ ವಹಿಸಿ: ಡಿಸಿ, ಸಿಇಒಗಳಿಗೆ ಸಿಎಂ ಸೂಚನೆ

ಬೆಂಗಳೂರಿನಲ್ಲಿ ಮಳೆ ಬಂದು ಸಾಕಷ್ಟು ಅನಾಹುತ ನಡೆದಿದೆ. ಇದಕ್ಕೆಲ್ಲಾ ಕ್ರಮ ಕೈಗೊಳ್ಳಬೇಕಿದೆ. ವೈಜ್ಞಾನಿಕವಾಗಿ ಅಂಡರ್ ಪಾಸ್ ಸರಿಮಾಡಲು ಸೂಚನೆ ನೀಡಿದ್ದೇವೆ ಎಂದು ಬೆಂಗಳೂರಿನಲ್ಲಿ ಮಳೆಯಾದಾಗ ಮುಂಜಾಗ್ರತಾ ಕ್ರಮವಾಗಿ ಅಂಡರ್ ಪಾಸ್ ಬಂದ್ ಮಾಡಿ. ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ ನೀಡಿದ್ದಾರೆ.

Share This Article
Leave a comment