ನಂಗೆ ಆ ಯುವತಿ ಯಾರು ಎಂಬುದೇ ಗೊತ್ತಿಲ್ಲ. ನನ್ನ ಮಾನಹಾನಿಯಾಗುತ್ತಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರೂ ಆಗಿರುವ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ಪ್ರತಿಕ್ರಿಯೆ ನೀಡಿದ್ದಾರೆ.
ಯುವತಿ ದೂರಿನ ಕುರಿತು ಮಾತನಾಡಿರುವ ಸ್ನೇಹಲ್ ಆ ಯುವತಿ ಯಾರು ಎಂದು ನನಗೆ ಗೊತ್ತಿಲ್ಲ. ನನ್ನ ಮಾನಹಾನಿಯಾಗುತ್ತಿದೆ. ನಾನು ಈ ಕುರಿತಂತೆ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸುತ್ತೇನೆ ಎಂದಿದ್ದಾರೆ.
ಕಲಬುರಗಿ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದೇನೆ. ಮಾಹಿತಿ ಕೂಡ ನೀಡಿದ್ದೇನೆ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವತಿ ನನ್ನ ವಿರುದ್ಧ ಮಾಡಿರುವ ಆರೋಪಗಳೆಲ್ಲಾ ಸುಳ್ಳು. ವಾಟ್ಸಾಪ್ ಚಾಟ್, ಫೋಟೋ ಎಲ್ಲವೂ ಕೂಡ ಫೇಕ್. ನನ್ನ ಫೋಟೋ ಅವರಿಗೆ ಹೇಗೆ ಸಿಕ್ಕಿತು ನನಗೆ ಗೊತ್ತಿಲ್ಲ ಎಂದು ಹೇಳಿದರು
ಆ ಯುವತಿ ಬರೆದಿರುವ ಪತ್ರವನ್ನು ಓದಿದ್ದೇನೆ. ಅದೆಲ್ಲಾವೂ ಕೂಡ ಸುಳ್ಳು. ಕುಟುಂಬಸ್ಥರಾಗಲಿ, ಜಿಲ್ಲಾಧಿಕಾರಿ ಮತ್ತು ಪೊಲೀಸ್ ಕಮೀಷನರ್ ಯಾರು ಕೂಡ ಸಂಧಾನ ಮಾಡಲು ಪ್ರಯತ್ನಿಸಿಲ್ಲ ಎಂದು ಹೇಳಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು