December 26, 2024

Newsnap Kannada

The World at your finger tips!

electric

ದೇಶಾದ್ಯಂತ ಆ. 10 ರಂದು ವಿದ್ಯುತ್ ನೌಕರರ ಮುಷ್ಕರ

Spread the love

ವಿದ್ಯುತ್ ಖಾಸಗೀಕರಣಗೊಳಿಸಲು ವಿದ್ಯುತ್ ಕಾಯ್ದೆ ತಿದ್ದುಪಡಿ ತರುವ ಕೇಂದ್ರದ ನಿರ್ಧಾರ ವಿರೋಧಿಸಿ ಆಗಸ್ಟ್ 10ರಂದು ದೇಶಾದ್ಯಂತ ವಿದ್ಯುತ್ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ.‌

ವಿದ್ಯುತ್ ಕಂಪನಿಗಳನ್ನು ಸರ್ಕಾರ ಖಾಸಗೀಕರಣ ಮಾಡಲು ಹೊರಟಿರುವ ಕ್ರಮ ವಿರೋಧಿಸಿ ದೇಶಾದ್ಯಂತ ಈ ಪ್ರತಿಭಟನೆ ನಡೆಯಲಿದೆ ಎಂದು ನೌಕರರ ಸಂಘಟನೆಗಳು ತಿಳಿಸಿವೆ.

ಕೇಂದ್ರ ಸರ್ಕಾರ ಈಗಾಗಲೇ ಹಲವು ವಲಯಗಳನ್ನು ಖಾಸಗೀಕರಣ ಮಾಡಿದೆ. ಅದೇ ರೀತಿ ವಿದ್ಯುತ್ ಕಂಪನಿಗಳನ್ನು ಖಾಸಗೀಕರಣ ಮಾಡಲು ಮುಂದಾಗಿದೆ. ಇದನ್ನು ವಿರೋಧಿಸಿ ಆ.10ರಂದು ನಡೆಸಲಾಗುತ್ತಿರುವ ಮುಷ್ಕರಕ್ಕೆ ಹಲವು ಸಂಘ-ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿವೆ.

ವಿದ್ಯುತ್ ಕಂಪನಿಗಳಿಂದ ಆಗಿರುವ ಲಕ್ಷಾಂತರ ಕೋಟಿ ನಷ್ಟವನ್ನು ಸರಿದೂಗಿಸುವ ನೆಪದಲ್ಲಿ ಕೇಂದ್ರ ಸರ್ಕಾರ ಖಾಸಗೀಕರಣಕ್ಕೆ ಮುಂದಾಗಿದೆ.

ಖಾಸಗೀಕರಣದಿಂದ ರೈತರು, ಬಡವರಿಗೆ ತೀವ್ರ ಸಂಕಷ್ಟ ಎದುರಾಗಲಿದೆ. ವಿದ್ಯುತ್ ಕಾಯ್ದೆ ತಿದ್ದುಪಡಿಯಿಂದ ಬಡವರಿಗೆ ಹಾಗೂ ರೈತರಿಗೆ ನೀಡುತ್ತಿರುವ ಭಾಗ್ಯಜ್ಯೋತಿ ಉಚಿತ ಯೋಜನೆಗೆ ಬ್ರೇಕ್ ಬೀಳುವ ಸಾಧ್ಯತೆಯಿದೆ ಎಂದು ಸಂಘಟನೆಗಳು ಹೇಳಿವೆ.

Copyright © All rights reserved Newsnap | Newsever by AF themes.
error: Content is protected !!