ಬೀದರ್-ಬೆಂಗಳೂರು ನಡುವಣ ಪ್ರಯಾಣ ವೆಚ್ಚ ಎಲ್ಲ ತೆರಿಗೆಗಳು ಸೇರಿದಂತೆ ₹ 2,599 ಇದೆ. 50 ನಿಮಿಷಗಳಲ್ಲಿ ಬೀದರ್‌ನಿಂದ ಬೆಂಗಳೂರಿಗೆ ತಲುಪಲಿದೆ. ವಿಮಾನದಲ್ಲಿ 50 ಜನ ಆರಾಮಾಗಿ ಪ್ರಯಾಣಿಸಬಹುದಾಗಿದೆ.ವಿಮಾನ ಭಾನುವಾರ, ಸೋಮವಾರ, ಬುಧವಾರ ಹಾಗೂ ಶುಕ್ರವಾರ ಸೇವೆ ಒದಗಿಸಲಿದೆ.
ಬೀದರ್-ಬೆಂಗಳೂರು ಮಧ್ಯೆ ಸಂಚರಿಸಲಿರುವ ಸ್ಟಾರ್ ಏರ್ ವಿಮಾನ ಸೇವೆ ಆರಂಭದ ಪ್ರಯುಕ್ತ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.
ಜೂನ್ 15 ರಂದು ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಬಂಧಿಸಿದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಅಧಿಕಾರಿಗಳು ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೂಚಿಸಿದರು.
ಮೊದಲ ವಿಮಾನಕ್ಕೆ ವಾಟರ್ ಸೆಲ್ಯೂಟ್, ಲೈಟಿಂಗ್ ಲ್ಯಾಂಪ್, ರಿಬ್ಬನ್ ಕತ್ತರಿಸುವ ಮೂಲಕ ಸ್ವಾಗತಿಸಲಾಗುವುದು. ವಿಮಾನದಲ್ಲಿ ಮೊದಲು ಬರುವ ಪ್ರಯಾಣಿಕರಿಗೆ ಬೋರ್ಡಿಂಗ್ ಪಾಸ್ ಹಾಗೂ ಇತರ ಎಲ್ಲ ಪ್ರಮಾಣಿಕರಿಗೆ ಕಾಣಿಕೆ ನೀಡಲಾಗುವುದು ಎಂದು ಹೇಳಿದರು.
ಬೀದರ್ ವಿಮಾನ ನಿಲ್ದಾಣದ ನಿರ್ದೇಶಕ ಅಮೀತ್ ಮಿಶ್ರಾ ಮಾತನಾಡಿ, ಸ್ಟಾರ್ ಏರ್ ವಿಮಾನ ಜೂನ್ 15 ರಂದು ಮಧ್ಯಾಹ್ನ 2.55ಕ್ಕೆ ಬೆಂಗಳೂರಿನಿಂದ ಹೊರಟು ಸಂಜೆ 4.05ಕ್ಕೆ ಬೀದರ್ ತಲುಪಲಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕ ಕಿಶೋರಬಾಬು, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಬೀದರ್ ಉಪ ವಿಭಾಗಾಧಿಕಾರಿ ನಯೀಮ್ ಮೊಮಿನ್ ಇದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು