ಆಟೋ ಚಾಲಕನೊಬ್ಬ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ಆರೋಪಿ ಮುಬಾರಕ್(28) ದೇವನಹಳ್ಳಿ ನಿವಾಸಿದ್ದಾನೆ. ಈತನನ್ನು ಸಂಪಿಗೆಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತೆ ಕಂಪ್ಯೂಟರ್ ಸೈನ್ಸ್ ಕೋರ್ಸ್ ಜೊತೆಗೆ ಮದುವೆಗಳಲ್ಲಿ ಸ್ವಾಗಕಾರರಾಗಿ ಪಾರ್ಟ್ ಟೈಂ ಕೆಲಸ ಮಾಡುತ್ತಿದ್ದಳು. ವಿವಾಹ ಸಮಾರಂಭಕ್ಕೆ ತೆರಳಿದ್ದ ಯುವತಿ ಕಾರ್ಯಕ್ರಮ ಮುಗಿಯುವಾಗ ತಡವಾದ ಹಿನ್ನೆಲೆಯಲ್ಲಿ ಮಂಟಪದಲ್ಲಿಯೇ ಉಳಿದು ಕೊಂಡಿದ್ದಾಳೆ. ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಥಣಿಸಂದ್ರ ಮುಖ್ಯರಸ್ತೆ ಬಳಿ ಬಸ್ಸಿಗಾಗಿ ಕಾಯುತ್ತಿದ್ದಳು. ಕೆಲ ಹೊತ್ತಾದರೂ ಬಸ್ಸು ಬಂದಿರಲಿಲ್ಲ. ಈ ವೇಳೆ ಅಲ್ಲಿಗೆ ಬಂದ ಆಟೋದವನು ಎಲ್ಲಿಗೆ ಹೋಗಬೇಕು ಎಂದು ಕೇಳಿದ್ದಾನೆ. ನಾಗವಾರ ಕಡೆ ಎಂದು ಸಂತ್ರಸ್ತೆ ಹೇಳಿದ್ದಾನೆ. ಆಗ ಆರೋಪಿ ಮುಬಾರಕ್ ನಾನು ಆ ಕಡೆನೆ ಹೋಗಬೇಕು ಎಂದು ಹೇಳಿ ಆಟೋ ಹತ್ತಿಸಿಕೊಂಡಿದ್ದಾನೆ.
ನಾಗವಾರ ಸಿಗ್ನಲ್ ಬಳಿ ಬರುತ್ತಿದ್ದಂತೆಯೇ ಸಂತ್ರಸ್ತೆ ಆಟೋ ನಿಲ್ಲಿಸುವಂತೆ ಸೂಚಿಸಿದ್ದಾಳೆ. ಆದರೆ ಮುಬಾರಕ್ ಯುವತಿಯ ಮಾತನ್ನು ಕೇಳದೆ ಮುಂದೆ ಸಾಗಿದ್ದಾನೆ. ಇದರಿಂದ ಗಾಬರಿಗೊಂಡ ಯುವತಿ ಚೀರಾಡಿದಾಗ, ನನಗೆ ಸ್ನೇಹಿತರೊಬ್ಬರಿಗೆ ಹಣ ಕೊಡಬೇಕು. ಅವರಿಂದ ಹಣ ಪಡೆದ ಕೂಡಲೇ ನೀವು ಹೇಳಿದ ಜಾಗಕ್ಕೆ ಕರೆದುಕೊಂಡು ಹೋಗಿ ಬಿಡುತ್ತೇನೆ ಎಂದು ಹೇಳಿದ್ದಾನೆ. ನಂತರ ನಿರ್ಜನ ಪ್ರದೇಶವೊಂದರಲ್ಲಿ ಆಟೋ ನಿಲ್ಲಿಸಿ, ಆಟೋದೊಳಗಿಂದ ಸಂತ್ರಸ್ತೆಯನ್ನು ಎಳೆದೊಯ್ದು ಆಕೆಯ ಮೇಲೆ ಕಾಮ ತೃಷೆ ತೀರಿಸಿಕೊಂಡಿದ್ದಾನೆ. ಬಳಿಕ ಯುವತಿಯನ್ನು ಅಲ್ಲಿಯೇ ಬಿಟ್ಟು ಸ್ಥಳದಿಂದ ಕಾಲ್ಕಿತ್ತಿದ್ದಾನೆ.
ನಂತರ ಯುವತಿ ಆ ಪ್ರದೇಶದಿಂದ ಹೊರ ಬಂದು ಮತ್ತೊಂದು ಬೈಕ್ ಸಹಾಯ ಪಡೆದು ಪೋಲಿಸ್ ಠಾಣೆಗೆ ತೆರಳಿ ಆಟೋ ನಂಬರ್ ಸಮೇತ ಮುಬಾರಕ್ ವಿರುದ್ದ ದೂರು ನೀಡಿದ್ದಾಳೆ. ಪೋಲಿಸರು ಮಿಂಚಿನ ಕಾರ್ಯ ಚರಣೆ ನಡೆಸಿ ಕೃತ್ಯ ಎಸಗಿದವನನ್ನು ಬಂಧಿಸಿದ್ದಾರೆ.
- ಮೈಸೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಮಾರ್ಗಸೂಚಿ ಜಾರಿ
- KSDL ನೌಕರ ಕೈಯಲ್ಲಿ ಡೆತ್ ನೋಟ್ ಹಿಡಿದು ಆತ್ಮಹತ್ಯೆ: ಕೆಲಸದ ಒತ್ತಡವೇ ಕಾರಣ?
- ಕೆಎಎಸ್ , ಸರ್ಕಾರಿ ಉದ್ಯೋಗ ಪಾಸ್ ಮಾಡಿಸೋ ಹೆಸರಿನಲ್ಲಿ ಲಕ್ಷಾಂತರ ವಂಚನೆ: ಆರೋಪಿ ಬಂಧನ
- ಜ. 2 ರಂದು ರಾಜ್ಯ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನಿರ್ಣಯ
- ಹೊಸ ವರ್ಷದ ಸಂಭ್ರಮ: ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ ಸಡಿಲಿಕೆ
More Stories
ಮೈಸೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಮಾರ್ಗಸೂಚಿ ಜಾರಿ
KSDL ನೌಕರ ಕೈಯಲ್ಲಿ ಡೆತ್ ನೋಟ್ ಹಿಡಿದು ಆತ್ಮಹತ್ಯೆ: ಕೆಲಸದ ಒತ್ತಡವೇ ಕಾರಣ?
ಕೆಎಎಸ್ , ಸರ್ಕಾರಿ ಉದ್ಯೋಗ ಪಾಸ್ ಮಾಡಿಸೋ ಹೆಸರಿನಲ್ಲಿ ಲಕ್ಷಾಂತರ ವಂಚನೆ: ಆರೋಪಿ ಬಂಧನ