ಕರ್ನಾಟಕ – ಕೇರಳ ಗಡಿ ತಪಾಸಣೆ ಲ್ಲಿದ್ದ ಪೊಲೀಸರ ಕಣ್ತಪ್ಪಿಸಿ ಗಡಿಯೊಳಗೆ ಪ್ರವೇಶಿಸುತ್ತಿದ್ದ ಕಾರನ್ನು ತಡೆಯಲು ಯತ್ನಿಸಿದಾಗ ಕಾರಿನಲ್ಲಿದ್ದ ದುಷ್ಕರ್ಮಿಯೊಬ್ಬ ವಿಟ್ಲ ಪೊಲೀಸ್ ಠಾಣೆಯ ಎಸ್ ಐ ಮೇಲೆ ಗುಂಡು ಹಾರಿಸಿದ ಘಟನೆ ದಕ್ಷಿಣ ಕನ್ಮಡ ಜಿಲ್ಲೆಯ ಸಾಲೆತ್ತೂರು ಬಳಿಯ ಕೋಡಂಗೆ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ.
ಈ ಘಟನೆಯಲ್ಲಿ ಗಾಯಗೊಂಡ
ಎಸ್ಐ ವಿನೋದ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೇರಳ ಕಡೆಯಿಂದ ಕಾರು ವಿಟ್ಲದ ಕಡೆಗೆಆಗಮಿಸುತ್ತಿರುವ ಕುರಿತು ವಿಟ್ಲ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ವಿಟ್ಲ ಪೊಲೀಸರು ಸಾಲೆತ್ತೂರು ಕೋಡಂಗೆ ಚೆಕ್ ಪೋಸ್ಟ್ ಗಡಿಯಲ್ಲಿ ಕಾರ್ಯಪ್ರವೃತ್ತ ರಾದರು.
ಕಾರು ಬರುತ್ತಿದ್ದಂತೆಯೇ ತಡೆದು ನಿಲ್ಲಿಸಿ ತಪಾಸಣೆ ನಡೆಸಲು ಯತ್ನಿಸಿದಾಗ ದುಷ್ಕರ್ಮಿಗಳು ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾರೆ.
ಘಟನೆಯ ಬೆನ್ನಲ್ಲೆ ಕಾರ್ಯಾಚರಣೆ ನಡೆಸಿದ ವಿಟ್ಲ ಠಾಣೆಯ ಪೊಲೀಸರು ಕೇರಳ ಮೂಲದ ಮೂವರು ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ.
ಒಂದೆಡೆ ಕೇರಳದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳದಿಂದ ಗಡಿಯಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದ್ದರೆ, ಇನ್ನೊಂದೆಡೆ ಚುನಾವಣಾ ಘೋಷಣೆಯಿಂದಾಗಿ ಎಲ್ಲಾ ವಾಹನಗಳ ತಪಾಸಣೆಯನ್ನು ನಡೆಸಲಾಗುತ್ತಿದೆ.
ಇದೀಗ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಯನ್ನು ತೀವ್ರಗೊಳಿಸಿದ್ದಾರೆ.
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ