March 31, 2023

Newsnap Kannada

The World at your finger tips!

PRSANN 60

ನಿವೃತ್ತ ಶಿಕ್ಷಕಿಯ ಹತ್ಯೆಗೈದ ದುಷ್ಕರ್ಮಿಗಳು ಚಿನ್ನಾಭರಣದೊಂದಿಗೆ ಪರಾರಿ

Spread the love

ದುಷ್ಕರ್ಮಿಗಳು ನಿವೃತ್ತ ಶಿಕ್ಷಕಿಯೊಬ್ಬರನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿ ಪರಾರಿಯಾದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರ ಅಂಬಾ ಭವಾನಿ ದೇವಸ್ಥಾನದ ಬಳಿ ನಡೆದಿದೆ.

ಮೂನ್ ಮಿಷನ್ ಉಡಾವಣೆಗೆ ಸೆ.23ಕ್ಕೆ ಮೂಹೂರ್ತ ಫಿಕ್ಸ್

ಪ್ರಸನ್ನ ಕುಮಾರಿ (60) ಕೊಲೆಯಾದ ನಿವೃತ್ತ ಶಿಕ್ಷಕಿ. ಕಳೆದ ತಡರಾತ್ರಿ‌ ಕೊಲೆ ನಡೆದಿದೆ. ಕೊಲೆ ಮಾಡಿ ಆಕೆಯ ಬಳಿಯಿದ್ದ ಚಿನ್ನಾಭರಣಗಳನ್ನು ಆರೋಪಿಗಳು ಹೊತ್ತೊಯ್ದಿದ್ದಾರೆ.

ವಿದ್ಯಾರಣ್ಯಪುರ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ವಿಜಯವಾಡ ಮೂಲದ ಪ್ರಸನ್ನ ಕುಮಾರಿ ಶಿಕ್ಷಕಿಯಾಗಿದ್ದರು. ಚಿಂತಾಮಣಿಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಇತ್ತೀಚಿಗೆ ನಿವೃತ್ತಿಯಾಗಿದ್ದರು. ಒಂಟಿಯಾಗಿ ಜೀವನವನ್ನು ಸಾಗಿಸುತ್ತಿದ್ದರು.

error: Content is protected !!