ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ಅನೈತಿಕ ಸಂಬಂಧ ವಿಚಾರಕ್ಕೆ ಗಲಾಟೆ ನಡೆದು ಒಡಹುಟ್ಟಿದ ಅಣ್ಣನನ್ನು ತಮ್ಮ ಚಾಕುವಿನಿಂದ ಇರಿದು ಕೊಂದ ಘಟನೆ ನಡೆದಿದೆ .
ಪ್ರಸಾದ್ (45) ಕೊಲೆಯಾದ ದುರ್ದೈವಿಯಾಗಿದ್ದು, ಪ್ರಸಾದ್ (39) ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಅತ್ತಿಗೆಗೆ ಮೈದುನ ಕುಮಾರ್ ನಿರಂತರವಾಗಿ ಅನೈತಿಕ ಸಂಬಂಧ ಇಟ್ಟುಕೊಳ್ಳುವಂತೆ ಪೀಡಿಸುತ್ತಿದ್ದನೆಂಬ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಗಲಾಟೆ ಆಗಿ ಬೇರೆ-ಬೇರೆ ವಾಸವಾಗಿದ್ದರು.
ಶನಿವಾರ (ಜೂನ್ 01) ತಡರಾತ್ರಿ ಅಣ್ಣನ ಮನೆಗೆ ಬಂದ ಕುಮಾರ್, ನನ್ನ ಜೊತೆ ಸಂಬಂಧ ಇಟ್ಟುಕೊಳ್ಳದೇ ಬೇರೆಯವರ ಜೊತೆ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಜಗಳ ತೆಗೆದಿದ್ದು ,ತನಗೆ ಬುದ್ಧಿವಾದ ಮಾತುಗಳನ್ನಾಡುತ್ತೀಯ ಎಂದು ಕುಮಾರ್ ಚಾಕುವಿನಿಂದ ಇರಿದು ಅಣ್ಣನನ್ನು ಕೊಂದಿದ್ದಾನೆ.
ಆರೋಪಿ ಕುಮಾರನನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ.ರಾಜ್ಯ ಸರ್ಕಾರದಿಂದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ : ಅಧಿಕೃತ ಆದೇಶ
ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಮೃತನ ಪತ್ನಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
More Stories
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ