ಬಿಜೆಪಿ ಸರ್ಕಾರ ಬಂದ ಮೇಲೆ ಅಭಿವೃದ್ಧಿ ಕೆಲಸಗಳನ್ನು ತಡೆಹಿಡಿದರು ಎಂದು ಎಲ್ಲರೂ ಹೇಳುತ್ತಾರೆ. ಆದರೆ ನನ್ನ ಕ್ಷೇತ್ರದಲ್ಲಿ ಬಿಜೆಪಿಯವರು 1 ಕೋಟಿಯ ಕೆಲಸವನ್ನು ಸಹ ತಡೆಹಿಡಿದಿಲ್ಲ ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಸಿ ಎಸ್ ಪುಟ್ಟರಾಜು ಹೇಳಿದರು.
ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಮೇಲುಕೋಟೆ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನನ್ನ ಕ್ಷೇತ್ರದಲ್ಲಿ ಇನ್ನೂ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಅವುಗಳ ಉದ್ಘಾಟನೆಗೆ ನಾರಾಯಣಗೌಡ ಹಾಗೂ ಯಡಿಯೂರಪ್ಪ ಅವರನ್ನು ಕರೆಯುತ್ತೇನೆ. ಆಗ ಅವರಿಗೆ ದೊಡ್ಡ ಮಟ್ಟದಲ್ಲಿ ಸನ್ಮಾನ ಮಾಡುತ್ತೇನೆ ಎಂದು ಸಮಾರಂಭದಲ್ಲಿ ಉಪಸ್ಥಿತರಿದ್ದ ಸಚಿವ ನಾರಾಯಣಗೌಡರನ್ನು ಕೊಂಡಾಡಿದರು.
ನನ್ನದೊಂದು ಸ್ವಾಥ೯ ಇದೆ. ಈ ಹಿಂದೆ ಸರ್ಕಾರ ಬಿದ್ದು ಹೋಗಬಹುದು ಎಂದು ಹೆಚ್ಚು ಅಭಿವೃದ್ಧಿ ಕೆಲಸ ಮಾಡಿಕೊಂಡೆ ಎಂದು ಹೇಳಿದ ಮಾಜಿ ಮಂತ್ರಿ ಪುಟ್ಟರಾಜು, ಬಹುತೇಕ ನಮಗೆ ಗೊತ್ತಾಗಿತ್ತು. ಈ ಸರ್ಕಾರ ಎಷ್ಟು ದಿನ ಇರುತ್ತೋ? ಇರಲ್ವೋ? ಅಂತ. ಈ ಕಾರಣಕ್ಕಾಗಿ ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಂಡೆ. ಅದು ತಪ್ಪೇ ಎಂದು ಪ್ರಶ್ನೆ ಮಾಡಿದರು.
ನಾನು ಸಚಿವನಿದ್ದಾಗ ಎಲ್ಲಾ ಕೆಲಸವನ್ನು ಅವರ ಕ್ಷೇತ್ರಕ್ಕೆ ಮಾಡಿಕೊಂಡರು ಎಂದು ಎಲ್ಲರೂ ಗಲಾಟೆ ಮಾಡಿದ್ದರು. ನಾವು ಇದ್ದ ಸರ್ಕಾರ ಎಷ್ಟು ದಿನ ಇರುತ್ತದೋ, ಇರಲ್ವೋ ಅನ್ನೋದು ನಮಗೆ ಗೊತ್ತಿತ್ತು. ಇದೇ ಕಾರಣಕ್ಕೆ ನಾನು ಸ್ವಲ್ಪ ಸ್ವಾರ್ಥದ ಕೆಲಸಗಳನ್ನು ಹೆಚ್ಚಾಗಿ ಮಾಡಿದೆ. ಈ ಮೂಲಕ ನನ್ನ ಕೇತ್ರದಲ್ಲಿ ನೀರಾವರಿಯನ್ನು ಅಭಿವೃದ್ಧಿ ಮಾಡಿದ್ದೇನೆ ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಚಿವ ನಾರಾಯಣಗೌಡ ಕುರಿತು ಮಾತನಾಡಿದ ಪುಟ್ಟರಾಜು, ನಮ್ಮನ್ನು ನೀವು ಅಧಿಕಾರದಿಂದ ಕಿತ್ತು ಹಾಕಿದಿರಿ ನಮಗೆ ಕೋಪನೂ ಇಲ್ಲ, ಬೇಸರವೂ ಇಲ್ಲ. ರಾಜಕೀಯ ಚದುರಂಗದಾಟದಲ್ಲಿ ಮೇಲೆ ಇದ್ದವರು ಕೆಳಗೆ ಬರಬಹುದು, ಕೆಳಗೆ ಇದ್ದವರು ಮೇಲೆ ಬರಬಹುದು. ಈಗ ನೀವು ಸಚಿವರಾಗಿದ್ದೀರಾ ನೀವು ಸಹ ಅಭಿವೃದ್ಧಿ ಕೆಲಸಗಳನ್ನು ಮಾಡಿ ಎಂದು ಸಲಹೆ ನೀಡಿದರು.
- ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
- 2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
- 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
- HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
- ಮಳೆ ನಿಂತರೂ ಮರದ ಹನಿ ನಿಲ್ಲದು
More Stories
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ
ಐಶ್ವರ್ಯಗೌಡ ವಂಚನೆ ಪ್ರಕರಣ: ಶಾಸಕ ನರೇಂದ್ರಸ್ವಾಮಿಯ ಕೈವಾಡ ಶಂಕೆ, ಅನ್ನದಾನಿಯ ಗಂಭೀರ ಆರೋಪ