Main News

ಬಿಜೆಪಿ ಸರ್ಕಾರ ನನ್ನ ಕ್ಷೇತ್ರದಲ್ಲಿ 1 ಕೋಟಿ ರು ಗಳ ಅಭಿವೃದ್ಧಿ ಕೆಲಸ ನಿಲ್ಲಿಸಿಲ್ಲ – ಶಾಸಕ ಪುಟ್ಟರಾಜು

ಬಿಜೆಪಿ ಸರ್ಕಾರ ಬಂದ ಮೇಲೆ ಅಭಿವೃದ್ಧಿ ಕೆಲಸಗಳನ್ನು ತಡೆಹಿಡಿದರು ಎಂದು ಎಲ್ಲರೂ ಹೇಳುತ್ತಾರೆ. ಆದರೆ ನನ್ನ ಕ್ಷೇತ್ರದಲ್ಲಿ ಬಿಜೆಪಿಯವರು 1 ಕೋಟಿಯ ಕೆಲಸವನ್ನು ಸಹ ತಡೆಹಿಡಿದಿಲ್ಲ ಎಂದು ಮೇಲುಕೋಟೆ ವಿಧಾನ‌ಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಸಿ ಎಸ್ ಪುಟ್ಟರಾಜು ಹೇಳಿದರು.

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಮೇಲುಕೋಟೆ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನನ್ನ ಕ್ಷೇತ್ರದಲ್ಲಿ ಇನ್ನೂ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಅವುಗಳ ಉದ್ಘಾಟನೆಗೆ ನಾರಾಯಣಗೌಡ ಹಾಗೂ ಯಡಿಯೂರಪ್ಪ ಅವರನ್ನು ಕರೆಯುತ್ತೇನೆ. ಆಗ ಅವರಿಗೆ ದೊಡ್ಡ ಮಟ್ಟದಲ್ಲಿ ಸನ್ಮಾನ ಮಾಡುತ್ತೇನೆ ಎಂದು ಸಮಾರಂಭದಲ್ಲಿ ಉಪಸ್ಥಿತರಿದ್ದ ಸಚಿವ ನಾರಾಯಣಗೌಡರನ್ನು ಕೊಂಡಾಡಿದರು.

ನನ್ನದೊಂದು ಸ್ವಾಥ‌೯ ಇದೆ. ಈ ಹಿಂದೆ ಸರ್ಕಾರ ಬಿದ್ದು ಹೋಗಬಹುದು ಎಂದು ಹೆಚ್ಚು ಅಭಿವೃದ್ಧಿ ಕೆಲಸ ಮಾಡಿಕೊಂಡೆ ಎಂದು ಹೇಳಿದ ಮಾಜಿ ಮಂತ್ರಿ ಪುಟ್ಟರಾಜು, ಬಹುತೇಕ ನಮಗೆ ಗೊತ್ತಾಗಿತ್ತು. ಈ ಸರ್ಕಾರ ಎಷ್ಟು ದಿನ ಇರುತ್ತೋ? ಇರಲ್ವೋ? ಅಂತ. ಈ ಕಾರಣಕ್ಕಾಗಿ ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಂಡೆ. ಅದು ತಪ್ಪೇ ಎಂದು ಪ್ರಶ್ನೆ ಮಾಡಿದರು.

ನಾನು ಸಚಿವನಿದ್ದಾಗ ಎಲ್ಲಾ ಕೆಲಸವನ್ನು ಅವರ ಕ್ಷೇತ್ರಕ್ಕೆ ಮಾಡಿಕೊಂಡರು ಎಂದು ಎಲ್ಲರೂ ಗಲಾಟೆ ಮಾಡಿದ್ದರು. ನಾವು ಇದ್ದ ಸರ್ಕಾರ ಎಷ್ಟು ದಿನ ಇರುತ್ತದೋ, ಇರಲ್ವೋ ಅನ್ನೋದು ನಮಗೆ ಗೊತ್ತಿತ್ತು. ಇದೇ ಕಾರಣಕ್ಕೆ ನಾನು ಸ್ವಲ್ಪ ಸ್ವಾರ್ಥದ ಕೆಲಸಗಳನ್ನು ಹೆಚ್ಚಾಗಿ ಮಾಡಿದೆ. ಈ ಮೂಲಕ ನನ್ನ ಕೇತ್ರದಲ್ಲಿ ನೀರಾವರಿಯನ್ನು ಅಭಿವೃದ್ಧಿ ಮಾಡಿದ್ದೇನೆ ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಚಿವ ನಾರಾಯಣಗೌಡ ಕುರಿತು ಮಾತನಾಡಿದ ಪುಟ್ಟರಾಜು, ನಮ್ಮನ್ನು ನೀವು ಅಧಿಕಾರದಿಂದ ಕಿತ್ತು‌ ಹಾಕಿದಿರಿ ನಮಗೆ ಕೋಪನೂ ಇಲ್ಲ, ಬೇಸರವೂ ಇಲ್ಲ. ರಾಜಕೀಯ ಚದುರಂಗದಾಟದಲ್ಲಿ ಮೇಲೆ ಇದ್ದವರು ಕೆಳಗೆ ಬರಬಹುದು, ಕೆಳಗೆ ಇದ್ದವರು ಮೇಲೆ ಬರಬಹುದು. ಈಗ ನೀವು ಸಚಿವರಾಗಿದ್ದೀರಾ ನೀವು ಸಹ ಅಭಿವೃದ್ಧಿ ಕೆಲಸಗಳನ್ನು ಮಾಡಿ ಎಂದು ಸಲಹೆ ನೀಡಿದರು.

Team Newsnap
Leave a Comment
Share
Published by
Team Newsnap

Recent Posts

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024

ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು; ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More

April 29, 2024

ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತ್ತು – ಎಚ್ ಡಿಕೆ

ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More

April 29, 2024

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024