February 21, 2026

Newsnap Kannada

The World at your finger tips!

srinivasan

ಕೇರಳದಲ್ಲಿ ಬಿಜೆಪಿ ಮುಖಂಡನ ಮನೆಗೆ ನುಗ್ಗಿ ಹತ್ಯೆ ಮಾಡಿದ ಗುಂಪು

Spread the love

ಬಿಜೆಪಿ ಮುಖಂಡರೊಬ್ಬರನ್ನು ಅವರ ಮನೆಯಲ್ಲಿಯೇ ದುಷ್ಕರ್ಮಿಗಳು ಹತ್ಯೆ ಮಾಡಿದ ಘಟನೆ ಕೇರಳದ ಅಲಪ್ಪುಳದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಬಿಜೆಪಿಯ ಮೋರ್ಚಾ ಕಾರ್ಯದರ್ಶಿ ರಂಜಿತ್ ಶ್ರೀನಿವಾಸನ್ ಎಂದು ಗುರುತಿಸಲಾಗಿದೆ.

ಭಾನುವಾರ ಬೆಳಗ್ಗೆ ರಂಜಿತ್ ಶ್ರೀನಿವಾಸನ್ ಮನೆಗೆ ನುಗ್ಗಿದ ಗುಂಪೊಂದು ಅವರ ಕತ್ತು ಸೀಳಿ ಕೊಂದಿದ್ದಾರೆ.

ಕೇರಳದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಕೆಎಸ್ ಶಾನ್ ಅವರ ಮೇಲೆ ಕೇರಳದ ಕೊಚ್ಚಿಯಲ್ಲಿ ಅಪರಿಚಿತ ಗ್ಯಾಂಗ್‍ವೊಂದು ದಾಳಿ ನಡೆಸಿತ್ತು.

ಇದಾದ ಒಂದು ದಿನದ ನಂತರ ರಂಜಿತ್ ಶ್ರೀನಿವಾಸನ್ ಅವರ ಹತ್ಯೆ ಮಾಡಲಾಗಿದೆ.

error: Content is protected !!