ಹಣಕ್ಕಾಗಿ ವೃದ್ಧ ದಂಪತಿಯನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಿಡದಿಯ ಈಗಲ್ ರೆಸಾರ್ಟ್ನ ಖಾಸಗಿ ವಿಲ್ಲಾದಲ್ಲಿ ನಡೆದಿದೆ.
ವಿಲ್ಲಾ ಮಾಲೀಕರಾದ ಆಶಾ (63), ರಘುರಾಜ್ (70) ಮೃತ ದಂಪತಿಗಳು
ಬಿಡದಿಯ ಈಗಲ್ ರೆಸಾರ್ಟ್ನ ಸಿ ಬ್ಲಾಕ್ನಲ್ಲಿ ಜೋಡಿ ಕೊಲೆ ನಡೆದಿದೆ.
ಮನೆಯ ಎರಡು ಪ್ರತ್ಯೇಕ ಕೋಣೆಗಳಲ್ಲಿ ಮಲಗಿದ್ದ ಗಂಡ ಹೆಂಡತಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.
ಸುಮಾರು ವರ್ಷಗಳಿಂದ ವೃದ್ಧ ದಂಪತಿ ಇದೇ ವಿಲ್ಲಾದಲ್ಲಿ ವಾಸಿಸುತ್ತಿದ್ದು, ಘಟನೆ ಸಂದರ್ಭದಲ್ಲಿ ಮನೆಗೆ ಕಾವಲಿಗಿದ್ದ ಸೆಕ್ಯೂರಿಟಿ ಪರಾರಿಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹಣಕ್ಕಾಗಿ ಸುತ್ತಿಗೆಯಲ್ಲಿ ಹೊಡೆದು ವೃದ್ಧ ದಂಪತಿಗಳನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಿಡದಿ ಪೊಲೀಸರು, ರಾಮನಗರ ಎಸ್ಪಿ ಸಂತೋಷ್ ಬಾಬು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಮೃತ ರಘುರಾಜ್ ಮಾಜಿ ಏರ್ಪೋರ್ಟ್ ಪೈಲೆಟ್ ಆಗಿದ್ದು, ಸ್ಥಳಕ್ಕೆ ಶ್ವಾನ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ