ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲು ವಿಜಯಪುರಕ್ಕೆ ಕುಟುಂಬ ಸಮೇತ ಹೊರಟಿದ್ದ ಐಎಎಸ್ ಅಧಿಕಾರಿಯ ಕಾರೊಂದು ಪಲ್ಟಿಯಾದ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪದ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಧಾರವಾಡ ಹೊರವಲಯ ಬೈಪಾಸ್ ರಸ್ತೆಯ ಯರಿಕೋಪ್ಪದ ಬಳಿ ಈ ಘಟನೆ ಬೆಳಗಿನ ಜಾವ 5.30ರ ಸುಮಾರಿಗೆ ನಡೆದಿದೆ.
ಕಾರಿನಲ್ಲಿದ್ದ ಐವರಿಗೂ ಸಣ್ಣ ಪುಟ್ಟ ಗಾಯಳಾಗಿವೆ. ಧಾರವಾಡದ ಎಸ್ ಡಿಎಂ ಆಸ್ಪತ್ರಗೆ ದಾಖಲು ಮಾಡಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಐಎಎಸ್ ಅಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ಪತ್ನಿ ಶ್ವೇತಾ, ಮಕ್ಕಳಾದ ತನ್ವಿ, ವಿಹಾನ್ ಹಾಗೂ ಪ್ರವೀಣಕುಮಾರ ಕಾರಿನಲ್ಲಿದ್ದರು.
ಇದುವರೆಗೂ ದಾವಣಗೆರೆ ಜಿಲ್ಲಾ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಯಾಗಿದ್ದ ವಿಜಯಮಹಾಂತೇಶ ದಾನಮ್ಮನವರ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ನಿನ್ನೆಯಷ್ಟೇ ಆದೇಶ ಮಾಡಿ ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿತ್ತು.
ಈ ಸರ್ಕಾರ ಆದೇಶ ಹೊರಡಿಸಿದ ಹಿನ್ನಲೆಯಲ್ಲಿ ಅಧಿಕಾರ ಸ್ವೀಕರಿಸಲು ಹೊರಟಿದ್ದ ಸಮಯದಲ್ಲಿಯೇ ಈ ದುರ್ಘಟನೆ ಸಂಭವಿಸಿದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ