January 16, 2025

Newsnap Kannada

The World at your finger tips!

promod madv

ಕೃಷ್ಣ ಮಠದ ಸ್ವಾಧೀನಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿತ್ತು: ಪ್ರಮೋದ್ ಮಧ್ವರಾಜ್

Spread the love

ಶ್ರೀಕೃಷ್ಣ ಮಠವನ್ನು ಸರ್ಕಾರದ ಅಧೀನಕ್ಕೆ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ಆಲೋಚಿಸಿತ್ತು. ಆದರೆ ಶ್ರೀ ಕೃಷ್ಣ ಮಠಕ್ಕೆ ತೊಂದರೆಯಾದರೆ ಮೊದಲು ನಾನೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಅಂತ ಹೇಳಿದ್ದೆ ಎಂದು ಕಾಂಗ್ರೆಸ್ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಅದಮಾರು ಪರ್ಯಾಯ ಸಮಾಪನ ಪ್ರಯುಕ್ತ ನಡೆಯುತ್ತಿರುವ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಮೋದ್ ಮಾತನಾಡಿದರು.

ಈ ಸ್ಫೋಟಕ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಮತ್ತು ನಾಯಕರಿಗೆ ಮತ್ತೊಮ್ಮೆ ಇರಿಸುಮುರಿಸು ಆಗಿದೆ.

ಮಧ್ವಾಚಾರ್ಯರು ಪ್ರತಿಷ್ಠಾಪಿಸಿದ ಮಠಕ್ಕೆ ಎಂಟುನೂರು ವರ್ಷಗಳ ಇತಿಹಾಸ ಇದೆ. ದೇಶವಿದೇಶಗಳಲ್ಲಿ ಭಕ್ತರನ್ನು ಹೊಂದಿರುವ ಮಠ, ಉಡುಪಿ ಜನರಿಗೊಂದು ಭಾಗ್ಯ. ನಮ್ಮದೇ ಸರ್ಕಾರ ಇದನ್ನು ವಶಪಡಿಸಲು ಮುಂದಾಗಿತ್ತು ಎಂದರು

ಆಗ ನಾನು ಮಠವನ್ನು ಮುಟ್ಟಿದರೆ ರಾಜೀನಾಮೆ ನೀಡುತ್ತೇನೆ ಎಂದು ಸಿದ್ದರಾಮಯ್ಯನವರಿಗೆ ಹೇಳಿ ಈ ವಿಚಾರಕ್ಕೆ ಫುಲ್ ಸ್ಟಾಪ್ ಹಾಕುವ ಮೂಲಕ ಶಾಸಕನಾಗಿ ಸಣ್ಣ ಸೇವೆ ಮಾಡಿದ್ದೇನೆ ಎಂಬ ತೃಪ್ತಿ ಇದೆ ಎಂದು ಹೇಳಿ ನೆನಪಿಸಿಕೊಂಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!