ಮಂಗಳೂರಿನ ಮಾರ್ಗನ್ಸ್ ಗೇಟ್‍ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ತಿರುವು ಸಿಕ್ಕಿದೆ.
ಈ ಸಾಮೂಹಿಕ ಆತ್ಮಹತ್ಯೆಗೆ ಮತಾಂತರ ಯತ್ನವೇ ಕಾರಣ ಎಂದು ಮಂಗಳೂರು ಪೊಲೀಸರ ತನಿಖೆಯಿಂದ ಗೊತ್ತಾಗಿದೆ
ಮಂಗಳೂರಿನ ಮಾರ್ಗನ್ಸ್ ಗೇಟ್‍ನಲ್ಲಿ ಒಂದೇ ಕುಟುಂಬದ ನಾಗೇಶ್ ಶೇರಿಗುಪ್ಪಿ(30), ಪತ್ನಿ ವಿಜಯಲಕ್ಷ್ಮಿ(26), ಮಕ್ಕಳಾದ ಸಪ್ನಾ(8) ಮತ್ತು ಸಮರ್ಥ್(4) ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಸ್ಮರಿಸಬಹುದು.
ಆತ್ಮಹತ್ಯೆಗೆ ನಿಜ ಕಾರಣವೇನು?:
ವಿಜಯಲಕ್ಷ್ಮಿ ಎಂಬಾಕೆ ಮುಸ್ಲಿಂ ಮಹಿಳೆ ನೂರ್ ಜಹಾನ್ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ನೂರ್ ಜಹಾನ್ ಮಂಗಳೂರಿನಲ್ಲಿ ಮದುವೆ ಬ್ರೋಕರ್ ಆಗದ್ದಾರೆ.
ವಿಜಯಲಕ್ಷ್ಮಿ ಮತ್ತು ಆಕೆಯ ಪತಿ ನಾಗೇಶ್ ನಡುವಿನ ಆಗಾಗ್ಗೆ ಜಗಳವನ್ನು ನಡೆಯುವುದನ್ನೇ ಉಪಯೋಗ ತೆಗೆದುಕೊಂಡ ಈಕೆ ನೀನು ನಿನ್ನ ಗಂಡನಿಗೆ ವಿಚ್ಛೇದನ ಕೊಟ್ಟು ನಮ್ಮ ಧರ್ಮಕ್ಕೆ ಮತಾಂತರವಾಗು, ನಂತರ ನಮ್ಮ ಧರ್ಮದಲ್ಲೇ ಒಂದು ಹುಡುಗನನ್ನು ನೋಡಿ ಮದುವೆ ಮಾಡಿಸುತ್ತೇನೆ ಎಂದು ಪುಸಲಾಯಿಸಿದ್ದಾರೆ.
ಪ್ರತಿದಿನ ಕುಡಿದು ಬರುತ್ತಿದ್ದ ಪತಿ ಜೊತೆಗಿನ ಜಗಳದಿಂದ ರೋಸಿ ಹೋಗಿದ್ದ ವಿಜಯಲಕ್ಷ್ಮೀ, ನೂರ್ ಜಹಾನ್ ಮಾತಿಗೆ ಸಮ್ಮತಿಸಿದ್ದರು
ವಿಜಯಲಕ್ಷ್ಮಿಗೆ ಗಂಡು ಹುಡುಕುವ ಕೆಲಸವನ್ನು ನೂರ್ ಜಹಾನ್ ಆರಂಭಿಸಿದ್ದರು. ನಾಗೇಶ್‍ಗೆ ಈ ವಿಚಾರ ತಿಳಿದು, ವಿಜಯಲಕ್ಷ್ಮಿ ಜೊತೆಗೆ ಗಲಾಟೆ ಮಾಡಿದ್ದಾನೆ. ಈ ವೇಳೆ ಮಕ್ಕಳು ಮತ್ತು ಪತ್ನಿಯನ್ನು ಕೊಂದು ನಾಗೇಶ್ ತಾನು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮಂಗಳೂರು ಪೊಲೀಸರು ನೂರ್ ಜಾನ್ ನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್