ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ಹೊರಟಿದ್ದ ದಂಪತಿ ಸಂಚರಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಅಮ್ಮಾಜಿ ಕೆರೆ ಬಳಿ ನಡೆದಿದೆ.
ಮುಂಡಗೋಡು ತಾಲೂಕಿನ ಅರಶಿಣಗೇರಿಯ ರಾಜು ವರ್ಗಿಸ್ ಹಾಗೂ ಬ್ಲೆಸ್ಸಿ ಮೃತಪಟ್ಟ ದಂಪತಿಗಳು.
ಇಂದು ಬೆಳಗ್ಗೆ ಅವರಿಬ್ಬರು ಸಂಬಂಧಿಕರೊಬ್ಬರು ಮೃತಪಟ್ಟ ಹಿನ್ನೆಲೆ ಅವರನ್ನು ನೋಡಲು ಕಾರಿನಲ್ಲಿ ತೆರಳುತ್ತಿದ್ದರು.
ಈ ವೇಳೆ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೆರೆಗೆ ಬಿದ್ದಿದೆ.
ಕಾರು ಪಲ್ಟಿಯಾಗಿ ಕೆರೆಗೆ ಮಗುಚಿ ಬಿದ್ದ ಕಾರಣ ಕಾರಿನ ಡೋರ್ ತೆರೆಯಲಾಗದೇ ದಂಪತಿ ಅಸುನೀಗಿದ್ದಾರೆ.
ಮುಂಡಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು