ಬೆಂಗಳೂರು ಟೌನ್ ಹಾಲ್ ಮುಂದೆ ಲಾರಿಯೊಂದು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ
ವಿಜಯವಾಣಿ ಹಿರಿಯ ಪತ್ರಕರ್ತ ಗಂಗಾಧರ ಮೂರ್ತಿ (49) ಮೃತಪಟ್ಟಿದ್ದಾರೆ.
ಮೃತರು, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಬೈಕ್ ನಲ್ಲಿ ಚಾಮರಾಜಪೇಟೆಯಲ್ಲಿರುವ ವಿಜಯವಾಣಿ ಕಚೇರಿಗೆ ಬರುತ್ತಿದ್ದಾಗ, ಟೌನ್ ಹಾಲ್ ಬಳಿ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ಡಿಕ್ಕಿ ಹೊಡೆದು ಬಿದ್ದಿದ್ದು, ಅಡಿಯಲ್ಲಿ ಸಿಲುಕಿದ ಗಂಗಾಧರ ಮೂರ್ತಿ ತೀವ್ರವಾಗಿ ಗಾಯಗೊಂಡಿದ್ದರು.
ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗದೆ ಕೊನೆಯುಸಿರೆಳೆದರು.
ಗಂಗಾಧರ ಮೂರ್ತಿ ಅವರ ಪತ್ರಕರ್ತ ವೃತ್ತಿ ಸೇವೆ ಗುರುತಿಸಿ ಇತ್ತೀಚೆಗೆ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ಕಾರ್ಯ ನಿರತ ಪತ್ರಕರ್ತರ ಸಂಘ ಸನ್ಮಾನಿಸಿತ್ತು.
ಸಂತಾಪ:
ಹಿರಿಯ ಪತ್ರಕರ್ತ ಗಂಗಾಧರ ಮೂರ್ತಿ ನಿಧನಕ್ಕೆ ವಿಜಯವಾಣಿ ಬಳಗ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್