ಸರ್ವಾಧಿಕಾರಿ ಎದೆ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಗೆ ಮಣಿಯಲೇಬೇಕು – ಸಿದ್ದು

Team Newsnap
1 Min Read

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿ ಆಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ದೇಶದ ಮಣ್ಣಿನ ಮಕ್ಕಳ‌ ಅಭೂತಪೂರ್ವ ಹೋರಾಟಕ್ಕೆ‌ ಗೆಲುವು ಸಿಕ್ಕಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಸರಣಿ ಟ್ವೀಟ್​ಗಳನ್ನು ಮಾಡಿದ ಸಿದ್ದರಾಮಯ್ಯ ಕೃಷಿ‌ ಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು. ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 25 ಲಕ್ಷ ರೂಪಾಯಿ‌ ಪರಿಹಾರ ಕೊಡಬೇಕೆಂದು ಒತ್ತಾಯಿಸಿದ್ದಾರೆ.

ಕೃಷಿ ಕಾಯ್ದೆ‌ಯಷ್ಟೇ ಅಲ್ಲ, ಕೇಂದ್ರ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾಗಿವೆ. ಹಾಗಾಗಿ ಇದು ವಿರಮಿಸುವ ಕಾಲ ಅಲ್ಲ,‌ ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ.

Share This Article
Leave a comment