July 7, 2022

Newsnap Kannada

The World at your finger tips!

vidansoudha

ಪಠ್ಯ ಪರಿಷ್ಕರಣಾ ಸಮಿತಿ ವಿಸರ್ಜನೆ – ರಾಜ್ಯ ಸರ್ಕಾರದ ಸ್ಪಷ್ಟನೆ

Spread the love

ಈಗಿನ ಪಠ್ಯ ಪರಿಷ್ಕರಣಾ ಸಮಿತಿಯನ್ನು ವಿಸರ್ಜನೆ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಯಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ.

ಆಕ್ಷೇಪಾರ್ಹ ವಿಷಯಗಳಿದ್ದಲ್ಲಿ ಅವುಗಳನ್ನು ಪುನರ್ ಪರಿಷ್ಕರಿಸಲಾಗುವುದು. ಬಸವಣ್ಣನವರ ಪಠ್ಯ ಪರಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲ ಕಾಲಕ್ಕೆ ತಕ್ಕಂತೆ ಪರಿಷ್ಕರಿಸಲಾಗುತ್ತದೆ. ರಾಜ್ಯದಲ್ಲಿ ಹಲವು ಬಾರಿ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗಿದೆ. ಈ ಹಿಂದೆ ಜಾರಿಯಲ್ಲಿದ್ದ ಕೆಲವು ಪಠ್ಯಪುಸ್ತಕಗಳಲ್ಲಿ ಹಲವು ಆಕ್ಷೇಪಾರ್ಹ ಅಂಶಗಳು ಇದ್ದ ಕಾರಣ ಸಮಾಜ ವಿಜ್ಞಾನ ಹಾಗೂ ಕನ್ನಡ ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಪಠ್ಯ ಪುಸ್ತಕಗಳ ಅಲ್ಪ ಪರಿಷ್ಕರಣೆಯನ್ನು ಮಾಡಲಾಗಿದೆ.

ಇದನ್ನು ಓದಿ –ಮುಕೇಶ್ ಅಂಬಾನಿಗೆ ಭಾರತದ ಅತ್ಯಂತ ಶ್ರೀಮಂತ ಪಟ್ಟಿಯಲ್ಲಿ ಮೊದಲ ಸ್ಥಾನ

ಸಿಎಂ ಹೇಳಿಕೆ ಪ್ರಮುಖ ಅಂಶಗಳು:

1) ಪ್ರಸ್ತುತ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿದೆ ಹೀಗಾಗಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿದೆ.

2) ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಯಾವಾದಾದರೂ ಆಕ್ಷೇಪಾರ್ಹ ವಿಷಯಗಳಿದ್ದಲ್ಲಿ ಅವುಗಳನ್ನು ಮತ್ತೊಮ್ಮೆ ಪರಿಷ್ಕರಿಸುವ ಮುಕ್ತ ಮನಸ್ಸನ್ನು ಸರ್ಕಾರವು ಹೊಂದಿದೆ. ಈ ಹಿನ್ನೆಲೆಯಲ್ಲಿ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಸೂಕ್ತವಾಗಿ ಪರಿಷ್ಕರಿಸಲು ನಿರ್ಧಾರ ಮಾಡಲಾಗಿದೆ.

3) ರಾಷ್ಟ್ರಕವಿ ಕುವೆಂಪುರವರ ನಾಡಗೀತೆಯನ್ನು ಆಕ್ಷೇಪಾರ್ಹವಾಗಿ ವಿಕೃತಿಗೊಳಿಸಿದ ಅಂಶವು ಪಠ್ಯಪುಸ್ತಕಗಳಲ್ಲಿ ಉಲ್ಲೇಖಗೊಳ್ಳದಿದ್ದರೂ, ಇದರ ಮೂಲಕವನ ಬರೆದ ವ್ಯಕ್ತಿಗಳ ಬಗ್ಗೆ ಕಾನೂನಾತ್ಮಕ ತನಿಖೆಯ ಕ್ರಮವನ್ನು ಸರ್ಕಾರವು ತೆಗೆದುಕೊಂಡಿದೆ.

4) ಈ ಹಿಂದಿನ ಪಠ್ಯಪುಸ್ತಕಗಳಲ್ಲಿ ಪರಿಚಯಿಸಲಾಗಿದ್ದ ಇಸ್ಲಾಂ ಮತ್ತು ಕ್ರೈಸ್ತ ಧರ್ಮದ ಜೊತೆ ಹಿಂದೂ ಧರ್ಮದ ವಿಷಯವನ್ನೂ ಸೇರ್ಪಡೆ ಮಾಡಿ ಪರಿಚಯಿಸಲಾಗಿದೆ.

5) ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ನಾಡಪ್ರಭು ಕೆಂಪೇಗೌಡರ ಕುರಿತಾದ ಪಾಠವನ್ನು ಹೊಸದಾಗಿ ಸೇರ್ಪಡೆ ಮಾಡಿದೆ.

error: Content is protected !!