Editorial

ಗ್ರಹಣ: ವಿಜ್ಞಾನಿಗಳ ಮಾಹಿತಿಯೇ ವಾಸ್ತವ

ನಮಗೆ ಖಾಯಿಲೆಯಾದಾಗ ಸಾಮಾನ್ಯವಾಗಿ ನಾವು ಹೋಗುವುದು ಡಾಕ್ಟರ್ ಬಳಿಗೆ, ನಮ್ಮ ಮನೆಯಲ್ಲಿ ಕಳ್ಳತನ ದರೋಡೆ ಆದಾಗ ಅಥವಾ ನಮಗೆ ಬೆದರಿಕೆ ಉಂಟಾದಾಗ ನಾವು ಸಂಪರ್ಕಿಸುವುದು ಪೋಲಿಸರನ್ನು,ನಮಗೆ ಯಾವುದೇ ರೀತಿಯ ಅನ್ಯಾಯವಾದರೆ ನಾವು ನ್ಯಾಯಾಲಯದಲ್ಲಿ ನ್ಯಾಯ ಕೇಳುತ್ತೇವೆ.

ನೀರಾವರಿ ಇಲಾಖೆ, ವಿದ್ಯುತ್ ಇಲಾಖೆ, ಶಿಕ್ಷಣ ಇಲಾಖೆ, ಕಂದಾಯ ಇಲಾಖೆ, ಕೃಷಿ ಇಲಾಖೆ, ಲೋಕೋಪಯೋಗಿ ಇಲಾಖೆ, ಅಬಕಾರಿ ಇಲಾಖೆ, ಸಂಸ್ಕೃತಿ ಇಲಾಖೆ, ಮಹಿಳಾ ಇಲಾಖೆ, ಮಕ್ಕಳ ಇಲಾಖೆ ಹೀಗೆ ಬದುಕಿಗೆ ಸಂಬಂಧಿಸಿದ ಎಲ್ಲಾ ಕ್ಷೇತ್ರಗಳಿಗೂ ಅಧಿಕೃತವಾಗಿ ಸರ್ಕಾರದ ಇಲಾಖೆಗಳು ಇವೆ. ಅವು ನೀಡುವ ಮಾಹಿತಿಯೇ ಬಹಳಷ್ಟು ಸತ್ಯ ಮತ್ತು ಅಂತಿಮ ಹಾಗೂ ವಾಸ್ತವಕ್ಕೆ ಹತ್ತಿರ ಎಂದು ಈ ವ್ಯವಸ್ಥೆಯಲ್ಲಿ ನಾವೆಲ್ಲರೂ ಒಪ್ಪಿದ್ದೇವೆ.

ಇಲ್ಲಿಯೂ ಒಂದಷ್ಟು ಅನ್ಯಾಯ ಅಕ್ರಮ ಭ್ರಷ್ಟಾಚಾರ ಇದ್ದರೂ ಇದನ್ನು ಒಪ್ಪದೆ ಬೇರೆ ದಾರಿ ಇಲ್ಲ. ನಾವೇ ಸೃಷ್ಟಿಸಿಕೊಂಡ ಅಧೀಕೃತ ವ್ಯವಸ್ಥೆ ಇದು.

ಹಾಗೆಯೇ ಖಗೋಳ ವಿಜ್ಞಾನದ ಬಗ್ಗೆ ಅಲ್ಲಿನ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಲು ಇಸ್ರೋ ಎಂಬ ಅಧೀಕೃತ ಸಂಸ್ಥೆ ಇದೆ. ಅದು ತನ್ನ ಸಂಪೂರ್ಣ ಅಧ್ಯಯನದ ಮಿತಿಯಲ್ಲಿ ವಿಶ್ವದ ಎಲ್ಲಾ ಖಗೋಳ ವಿಜ್ಞಾನದ ಸಂಪರ್ಕ ಬಳಸಿ ಮಾಹಿತಿ ಸಂಗ್ರಹಿಸಿ ನಮಗೆ ವಾತಾವರಣದ ಯಾವುದೇ ಏರಿಳಿತ. ಗಳನ್ನು ತಿಳಿಸುತ್ತದೆ.

ಅದರ ಪ್ರಕಾರ,ಭೂಮಿ, ಚಂದ್ರ, ಸೂರ್ಯನ ಸುತ್ತುವಿಕೆಯ ನಡುವಿನ ನೆರಳು ಬೆಳಕಿನಾಟವೇ ಗ್ರಹಣ. ಇದೊಂದು ಅಂತರಿಕ್ಷದ ಸಹಜ ಕ್ರಿಯೆ. ಅದರಿಂದ ಏನಾದರೂ ಗಂಭೀರವಾದ ಪರಿಣಾಮವಾಗುವುದಿದ್ದರೆ ಅವರೇ ಮಾಹಿತಿ ನೀಡುತ್ತಾರೆ ಮತ್ತು ಎಚ್ಚರಿಸುತ್ತಾರೆ.

ನೋಡಿ, ನಾಗರಿಕತೆಯ ಪ್ರಾರಂಭದಲ್ಲಿ ಡಾಕ್ಟರ್ ಪೋಲೀಸ್ ಸರ್ಕಾರ ಏನೂ ಇಲ್ಲದಿದ್ದ ಸಂದರ್ಭದಲ್ಲಿ ಆಗಿನ ಜನರೇ ಅನುಭವದ ಆಧಾರದ ಮೇಲೆ ತಮ್ಮ ಸಮಸ್ಯೆಗಳನ್ನು ಸಾಧ್ಯವಾದ ಮಟ್ಟಿಗೆ ಬಗೆಹರಿಸಿಕೊಳ್ಳುತ್ತಿದ್ದರು.

ಅದೇ ರೀತಿ ಖಗೋಳದಲ್ಲಿ ಆಗುತ್ತಿದ್ದ ಬದಲಾವಣೆಗಳನ್ನು ತಮ್ಮ ಅನುಭವದ ಜ್ಞಾನದಿಂದಲೇ ಗುರುತಿಸಿ ಮಾಹಿತಿ ನೀಡುತ್ತಿದ್ದರು. ಇದು ಬಹುತೇಕ ನಿಜವೇ ಆಗಿರುತ್ತಿತ್ತು. ಭಾರತದಲ್ಲಿ ಮಾತ್ರವಲ್ಲ ವಿಶ್ವದ ಎಲ್ಲಾ ಭಾಗಗಳಲ್ಲಿಯೂ ಇದೇ ರೂಡಿಯಲ್ಲಿತ್ತು.

ಗಿಡಮೂಲಿಕೆಗಳೇ ಔಷಧಗಳಾಗಿ, ಪಂಚಾಯತಿ ಕಟ್ಟೆಗಳೇ ನ್ಯಾಯಾಲಯಗಳಾಗಿ ಕಾರ್ಯನಿರ್ವಹಿಸುತ್ತಿದ್ದವು. ಆ ಕಾಲಘಟ್ಟದಲ್ಲಿ ಅವ್ಯವಸ್ಥೆ, ಅನ್ಯಾಯ, ಅಸಮಾನತೆ, ಅಸಮರ್ಪಕ ನಿರ್ವಹಣೆಯ ವಿರುದ್ದವಾಗಿ ಈಗ ಆಧುನಿಕ ಪ್ರಜಾಪ್ರಭುತ್ವ, ತಂತ್ರಜ್ಞಾನ ಮತ್ತು ಅಧೀಕೃತ ವ್ಯವಸ್ಥೆ ರೂಪಿಸಿಕೊಳ್ಳಲಾಗಿದೆ. ಹಿಂದಿನ ವ್ಯವಸ್ಥೆ ಕೆಲವು ಉತ್ತಮ ರೀತಿಯಲ್ಲಿ ಇದ್ದರೂ ಬೃಹತ್ ಜನಸಂಖ್ಯೆಯಲ್ಲಿ ಅವು ತಮ್ಮ ಅಸ್ತಿತ್ವ ಕಳೆದುಕೊಂಡಿವೆ. ಸಾರ್ವತ್ರಿಕ ನ್ಯಾಯ ಕಲ್ಪಿಸುವಲ್ಲಿ ವಿಫಲವಾಗಿವೆ.

ಇದರ ಆಧಾರದಲ್ಲಿ,
ಗ್ರಹಣ ಎಂದರೇನು ?
ಅದು ಹೇಗೆ ಸಂಭವಿಸುತ್ತವೆ ?
ಅದರ ಪರಿಣಾಮಗಳೇನು ?
ಯಾವ ರೀತಿಯ ಮುನ್ನೆಚ್ಚರಿಕೆ ವಹಿಸಬೇಕು ?
ಎಂದು ಅಧೀಕೃತ ಖಗೋಳ ವಿಜ್ಞಾನಿಗಳು ನೀಡುವ ಮಾಹಿತಿಯೇ ನಮಗೆ ಸದ್ಯದ ವಾಸ್ತವ.

ಟಿವಿ ಮಾಧ್ಯಮಗಳಲ್ಲಿ ಕುಳಿತು ಕುಂಕುಮ ವಿಭೂತಿ ಕಾಷಯಾ ತೊಟ್ಟು ಶ್ಲೋಕಗಳನ್ನು ಪಠಿಸುತ್ತಾ ಕೊಟ್ಯಾನುಕೋಟಿ ದೂರದ ಖಗೋಳ ವೈಚಿತ್ರ್ಯ ವಿಸ್ಮಯಗಳ ಬಗ್ಗೆ ಮಾತನಾಡುವುದರಲ್ಲಿ ಸ್ವಲ್ಪ ಮಟ್ಟಿಗೆ ನಿಜವಿದ್ದರೂ ಅದು ಸಾರ್ವತ್ರಿಕವಲ್ಲ, ಅಧೀಕೃತಲ್ಲ, ಸಂಪೂರ್ಣ ನಂಬಿಕೆಗೆ ಅರ್ಹವಲ್ಲ.

ರಾಶಿಗಳ ಆಧಾರದಲ್ಲಿ ಪ್ರತಿ ವ್ಯಕ್ತಿಯ ಬದುಕಿನಲ್ಲಿ ಏನೇನೂ ಬದಲಾವಣೆ ಆಗುತ್ತದೆ. ಇನ್ನೇನೋ ಅವಘಡ ಸಂಭವಿಸುತ್ತದೆ ಎಂದು ಪ್ರಕೃತಿಯ ಸಹಜ ಕ್ರಿಯೆಯನ್ನು ಭೂತ ಮಾಡಲಾಗಿದೆ.
ಸೃಷ್ಟಿಯ ಅಗಾಧತೆ, ವೈವಿಧ್ಯತೆ, ಬೃಹತ್ ಜನಸಂಖ್ಯೆಯ ಬಗ್ಗೆ ಅವರಿಗೆ ಕಲ್ಪನೆ ಇಲ್ಲದೆ ಸಂಕುಚಿತವಾಗಿ ಮಾತನಾಡುತ್ತಾರೆ.

ಮತ್ತೊಮ್ಮೆ ಯೋಚಿಸಿ ನಿಮ್ಮ ಅಭಿಪ್ರಾಯ ರೂಪಿಸಿಕೊಳ್ಳಿ. ಹೇಗಿದ್ದರೂ ಆ ಸ್ವಾತಂತ್ರ್ಯ ನಿಮಗಿದೆ. ಯೋಚಿಸಲು ಪ್ರೇರೇಪಿಸುವುದಷ್ಟೇ ಕೆಲಸ.‌

ವಿವೇಕಾನಂದ. ಹೆಚ್.ಕೆ.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024