ಮಡಿಕೇರಿ ಬಳಿ ಸೀಮೆ ಹುಲ್ಲು ಕಜೆ ಬೆಟ್ಟದಲ್ಲಿ ಭಾರಿಸ್ಫೋಟ – ಗ್ರಾಮಸ್ಥರಲ್ಲಿ ಆತಂಕ

Team Newsnap
1 Min Read

ಕೊಡಗಿನ ಜನತೆ ಈ ಬಾರಿಯು ಮಳೆ ಅವಾಂತರಗಳಿಂದ ಭೂಕಂಪನ, ಜಲಸ್ಫೋಟ, ಬೆಟ್ಟ ಕುಸಿತದಿಂದಾಗಿ ಬೆಚ್ಚಿ ಬೀಳುತ್ತಿದ್ದಾರೆ.

ಕಳೆದ ರಾತ್ರಿ ಸೀಮೆ ಹುಲ್ಲು ಕಜೆ ಗ್ರಾಮದ ಬೆಟ್ಟ ಪ್ರದೇಶದಲ್ಲಿ ಜಲಸ್ಫೋಟವಾಗಿ ಒಂದು ಭಾಗದ ಬೆಟ್ಟವೇ ಕುಸಿತವಾಗಿದೆ. ಜಿಲ್ಲೆಯಲ್ಲಿ ಮಳೆ ಅರ್ಭಟ ಕಡಿಮೆ ಅಗಿದ್ದರೂ ಮಳೆಯ ಅವಾಂತರಗಳು ಮಾತ್ರ ಮುಂದುವರಿಯುತ್ತಿದೆ.

ಮಡಿಕೇರಿ ತಾಲೂಕಿನ ರಾಮಕೊಲ್ಲಿಯಲ್ಲಿ ಜಲಸ್ಫೋಟ, 2ನೇ ಮೊಣ್ಣಂಗೇರಿಯ ನಿಶಾನಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿರುವ ಬೆನ್ನಲ್ಲೇ ನಿನ್ನೆ ತಡರಾತ್ರಿ ಮದೆನಾಡಿನ ಕೊಪ್ಪಡ್ಕ ಸಮೀಪದ ಸೀಮೆ ಹುಲ್ಲು ಕಜೆ ಬೆಟ್ಟದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಮಾತ್ರವಲ್ಲ ಬೆಟ್ಟ ಜರಿದು ಬಿದ್ದಿದೆ. ಸದ್ಯ ಬೆಟ್ಟದ ಒಂದು ಭಾಗದ ಸಂಪೂರ್ಣ ಮಣ್ಣು ನೀರಿನೊಂದಿಗೆ ಜರಿದುಕೊಂಡು ಮದೆನಾಡಿನ ಮೂಲಕ ಜೋಡುಪಾಲದವರೆಗೆ ಕೆಸರು ಮಿಶ್ರಿತ ನೀರು ಹರಿದುಕೊಂಡು ಬಂದಿದೆ.

ಅಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆ ಭಾಗದಲ್ಲಿ ಮನೆಗಳಿಲ್ಲ. ಕೆಳ ಭಾಗದಲ್ಲಿ ಇರುವ 15 ಮನೆಯ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.ಶಿಕ್ಷಕರ ನೇಮಕಾತಿ ಹಗರಣ – WB ಟಿಎಂಸಿ ಸಚಿವ ಪಾರ್ಥ ಚಟರ್ಜಿ ಬಂಧನ

ಜಿಲ್ಲೆಯಲ್ಲಿ ಜೋರಾಗಿ ಮಳೆ ಸುರಿದ್ರೆ ಜಲಸ್ಫೋಟವಾದ ಬೆಟ್ಟ ಇನ್ನಷ್ಟು ಕುಸಿಯುವ ಸಾಧ್ಯತೆ ಇದೆ. ಮಾತ್ರವಲ್ಲ ಹಾಗೆ ಕುಸಿದು ಬಂದ ಮಣ್ಣು ಜೋಡುಪಾಲದ ತನಕ ಬಂದು ರಾಷ್ಟ್ರೀಯ ಹೆದ್ದಾರಿಯ ರಸ್ತೆಗೆ ಬೀಳುವ ಸಾಧ್ಯತೆ ಹೆಚ್ಚಿದೆ. 2018ರಲ್ಲೇ ಈ ಬೆಟ್ಟ ಜರಿದ ಪರಿಣಾಮ ಜೋಡುಪಾಲದಲ್ಲಿ ಸಾಕಷ್ಟು ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿತ್ತು.

ಈ ಬೆಟ್ಟ ಜರಿದ ಒಂದು ಭಾಗವಷ್ಟೇ ಕಣ್ಣಿಗೆ ಗೋಚರಿಸುತ್ತಿದೆ. ಬೆಟ್ಟ ಕುಸಿತವಾಗುವ ಮೊದಲು ಬೆಟ್ಟ ಪ್ರದೇಶದಿಂದ ಜೋರಾದ ಶಬ್ಧ ಕೇಳಿ ಬಂದಿದ್ದು ಗ್ರಾಮದ ಸುತ್ತಮುತ್ತಲಿನ ಜನರು ಆತಂಕಕ್ಕೆ ಒಳಗಾಗಿದ್ದಾರೆ.

Share This Article
Leave a comment