ಒಂದು ಬಾರಿ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದಿದ್ದಳು. ಈ ಬಾರಿ ಆಕೆಯ ಸಾವನ್ನು ತಡೆಯಲು ಆಗಲೇ ಇಲ್ಲ. ವೈದ್ಯಕೀಯ ವಿದ್ಯಾರ್ಥಿನಿ ಕೊನೆಗೂ ಆತ್ಮಹತ್ಯೆ ಮಾಡಿಕೊಂಡಳು.
ಶಿವಮೊಗ್ಗ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ಲಲಿತಾ (23) ಎಂಬಾಕೆಯ ಆತ್ಮಹತ್ಯೆ ಮಾಡಿಕೊಂಡ ಯುವತಿ.
ತಂದೆ ವೆಂಕಟೇಶ್ ಶಿಕ್ಷಕರು ಭದ್ರಾವತಿಯಲ್ಲಿ ವಾಸವಾಗಿದ್ದಾರೆ. ಲಲಿತಾ ಮಾತ್ರ ಶಿವಮೊಗ್ಗದ ಹಾಸ್ಟೆಲ್ ನಲ್ಲಿ ಇದ್ದುಕೊಂಡು ಲ ವಿದ್ಯಾಭ್ಯಾಸ ಮಾಡುತ್ತಿದ್ದಳು.
ಈ ಹಿಂದೆಯೂ ಲಲಿತಾ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿ ಬದುಕುಳಿದಿದ್ದಳು. ನಿನ್ನೆ ರಾತ್ರಿ ಬಹು ಹೊತ್ತಿನ ತನಕ ಓದುತ್ತಿದ್ದ ಲಲಿತಾ
ಬೆಳಿಗ್ಗೆ ಆಗುವುದರೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇಂದು ಬೆಳಗ್ಗೆ ಲಲಿತಾ ರೂಂ ನಿಂದ ಹೊರಗೆ ಬರಲೇ ಇಲ್ಲ. ಆಗ ಹಾಸ್ಟೆಲ್ ಅಧೀಕ್ಷರು ಪೊಲೀಸರ ಸಮ್ಮುಖದಲ್ಲಿ ಬಾಗಿಲು ಒಡೆದು ನೋಡಿದ್ದಾಗ ಲಲಿತಾ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಲಲಿತಾಳ ಸಾವಿಗೆ ಕಾರಣ ಏನೆಂಬುದು ಗೊತ್ತಾಗಿಲ್ಲ.
ದೊಡ್ಡ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ