ಆಂಧ್ರಪ್ರದೇಶದಲ್ಲಿ 13 ಹೊಸ ಜಿಲ್ಲೆ ರಚನೆ – ಆ ರಾಜ್ಯದ ಜಿಲ್ಲೆಗಳ ಸಂಖ್ಯೆ 26ಕ್ಕೆ ಏರಿಕೆ

Team Newsnap
1 Min Read

ಆಂಧ್ರಪ್ರದೇಶದಲ್ಲಿ ಆಡಳಿತ ಸುಧಾರಣೆ ತರಲು ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರ ಬುಧವಾರ ಬೆಳಿಗ್ಗೆ 13 ಹೊಸ ಜಿಲ್ಲೆಗಳ ರಚನೆ ಮಾಡಿ ಅಧಿಸೂಚನೆಯನ್ನು ಹೊರಡಿಸಿದೆ.

ಆಡಳಿತವನ್ನು ಸರಾಗಗೊಳಿಸಲು ಮತ್ತು ಅಧಿಕಾರಿಗಳ ಪ್ರವೇಶವನ್ನು ಸುಧಾರಿಸುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಈಗಿರುವ 13 ಜಿಲ್ಲೆಗಳ ಸಂಖ್ಯೆಯನ್ನು ದ್ವಿಗುಣಗೊಳಿಸಿದೆ. ಶ್ರೀ ಬಾಲಾಜಿ, ಅನ್ನಮಯ್ಯ, ಶ್ರೀ ಸತ್ಯಸಾಯಿ, ನಂದ್ಯಾಲ, ಬಾಪಟ್ಲ, ಪಲ್ನಾಡು, ಏಲೂರು, ಎನ್‍ಟಿಆರ್, ಅನಕಾಪಲ್ಲಿ, ಕಾಕಿನಾಡ, ಕೋನಾ ಸೀಮಾ, ಮಾನ್ಯಂ, ಅಲ್ಲೂರಿ ಸೀತಾರಾಮ ರಾಜು ನೂತನ ಜಿಲ್ಲೆಗಳಾಗಿವೆ

25 ಲೋಕಸಭಾ ಕ್ಷೇತ್ರಗಳನ್ನು ಪ್ರತಿಯೊಂದನ್ನು ಜಿಲ್ಲೆಯಾಗಿ ಪುನಾರಚಿಸಲಾಗಿದೆ. ಅರಕು ಕ್ಷೇತ್ರವನ್ನು ನಾಲ್ಕು ಕ್ಷೇತ್ರಗಳಾಗಿ ರಚಿಸಲಾಗಿದೆ.


ಆಂಧ್ರಪ್ರದೇಶ ಜಿಲ್ಲೆಗಳ ರಚನೆ ಕಾಯ್ದೆಯ ಸೆಕ್ಷನ್ 3(5) ಅಡಿ ಜಿಲ್ಲೆಗಳನ್ನು ರಚನೆ ಮಾಡಲಾಗಿದೆ , ಈ ಮೂಲಕ ಆಂಧ್ರಪ್ರದೇಶದಲ್ಲಿರುವ ಒಟ್ಟು ಜಿಲ್ಲೆಗಳ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.

Share This Article
Leave a comment