December 24, 2024

Newsnap Kannada

The World at your finger tips!

siddalinga

ಕಲಾಗ್ರಾಮದಲ್ಲಿ ಸರ್ಕಾರಿ ಗೌರವಗಳೊಂದಿಗೆ ಕವಿ‌ ಸಿದ್ದಲಿಂಗಯ್ಯ ಅಂತ್ಯಕ್ರಿಯೆ

Spread the love

ಪಂಚಭೂತಗಳಲ್ಲಿ
ಕವಿ ಸಿದ್ದಲಿಂಗಯ್ಯ ಲೀನ : ಸರ್ಕಾರಿ ಗೌರವದಿಂದ ಅಂತ್ಯಕ್ರಿಯೆ

ಕೋವಿಡ್‌ನಿಂದ ಶುಕ್ರವಾರ ನಿಧನರಾದ ಕವಿ ಡಾ.ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆ ಶನಿವಾರ ಬೆಂಗಳೂರಿನ ಕಲಾಗ್ರಾಮದಲ್ಲಿ ನಡೆಯಿತು.

ಸರ್ಕಾರಿ ಗೌರವಗಳೊಂದಿಗೆ ಸಿದ್ದಲಿಂಗಯ್ಯ ಅವರಿಗೆ ಅಂತಿಮ ನಮನ‌ ಸಲ್ಲಿಸಲಾಯಿತು. ‌

ಸರ್ಕಾರದ ಪರವಾಗಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅಂತಿಮ ನಮನ ಸಲ್ಲಿಸಿ ಗೌರವ ಸಮರ್ಪಣೆ ಮಾಡಿದರು.

ಶಾಸಕ ಮುನಿರತ್ನ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಅಗಲಿದ ಚೇತನಕ್ಕೆ ನಮನ ಅರ್ಪಿಸಿದರು

ಈ ವೇಳೆ ಮಾತನಾಡಿದ ಡಿಸಿಎಂ ಅಶ್ವತ್ಥ ನಾರಾಯಣ, ರಾಜ್ಯ ಕಂಡ ಶ್ರೇಷ್ಠ ಸಾಹಿತಿ.ದಮನಿತರ ದನಿಯಾಗಿದ್ದ ಡಾ.ಸಿದ್ದಲಿಂಗಯ್ಯ. ಅವರ ನಿಧನ ಬಹಳ ನೋವಿನ ಸಂಗತಿ. ತಮ್ಮ ಬದುಕು, ನೋವುಗಳನ್ನೇ ಸಾಹಿತ್ಯವಾಗಿ ಬರೆದವರು ಅವರು. ಎರಡು ಅವಧಿಗಳಿಗೆ ವಿಧಾನ ಪರಿಷತ್‌ ಸದಸ್ಯರಾಗಿದ್ದರು. ಸದನದಲ್ಲಿ ವಿಚಾರ ಮಂಡನೆ, ಚರ್ಚೆ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದರು ಎಂದರು.

Copyright © All rights reserved Newsnap | Newsever by AF themes.
error: Content is protected !!