ಸೇತುವೆ ಮೇಲಿಂದ ಜಿಗಿದು ಭೀಮಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿ ಶವ ಇಂದು ಪತ್ತೆಯಾಗಿದೆ.
ಯುವತಿಯೊಬ್ಬಳು ಹೆತ್ತವರ ಕಣ್ಣೆದ್ದುರಲ್ಲೇ ಭೀಮಾ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು.
ಧಾರವಾಡದ ನವಲಗುಂದ ಪಟ್ಟಣದ ನಿವಾಸಿಯಾಗಿರುವ ಐಶ್ವರ್ಯ ಕುಟುಂಬಸ್ಥರೊಂದಿಗೆ ಗಾಣಗಾಪುರ ದತ್ತಾತ್ರೆಯ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಮಾರ್ಗ ಮಧ್ಯೆ ವಿಜಯಪುರದ ಆಲಮೇಲ ಮತ್ತು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕು ನಡುವೆ ಭೀಮಾನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಸೇತುವೆ ಬಳಿ ವಾಹನ ನಿಲ್ಲಿಸುವಂತೆ ಐಶ್ವರ್ಯಾ ಕೇಳಿದ್ದಾಳೆ. ಬಳಿಕ ನದಿಗೆ ನಾಣ್ಯ ಹಾಕಬೇಕೆಂದು ಹೇಳಿ ವಾಹನ ಇಳಿದು ಸೇತುವೆಯ ಅಂಚಿಗೆ ಹೋಗಿ, ಮೇಲಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಆಲಮೇಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು