ಮಂಡ್ಯ
ದೇಶದಲ್ಲಿ ಮತ್ತೊಂದು ಗೋದ್ರಾ ಹಾಗೂ ಪುಲ್ವಾಮಾ ಮಾದರಿ ದಾಳಿ ಮರುಕಳಿಸಬಹುದು ಎಂದು ಹೇಳಿರುವ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ವಿಚಾರಣೆ ನಡೆಸಬೇಕು ಎಂದು ಮಂಡ್ಯ ಭಾರತೀಯ ಜನತಾ ಪಾರ್ಟಿ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.
ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಆಪ್ತರಾಗಿರುವ ಬಿ.ಕೆ.ಹರಿಪ್ರಸಾದ್ ಅಯೋಧ್ಯೆಯಲ್ಲಿ ಶ್ರೀ ರಾಮಮೂರ್ತಿ ಪ್ರತಿಷ್ಠಾಪನೆ ಸಂಭ್ರಮದಲ್ಲಿ ಜನತೆ ಇರುವಾಗ ದೇಶದ ಬೆಚ್ಚಿಬಿಳಿಸುವ ಹೇಳಿಕೆ ನೀಡಿರುವುದು ಅಘಾತಕಾರಿಯಾಗಿದೆ ಎಂದು ಬಿಜೆಪಿ ಹೇಳಿದೆ.
ದೇಶದ ಎಲ್ಲೆಲ್ಲಿ ಸಭೆಗಳು ನಡೆದಿವೆ, ಇದರಲ್ಲಿ ಕಾಂಗ್ರೆಸ್ ಪಕ್ಷದ ಪಿತೂರಿ ಇದೆಯಾ ಎಂಬ ಬಗ್ಗೆ ಅನುಮಾನವಿದೆ ಆ ಹಿನ್ನೆಲೆಯಲ್ಲಿ ಹರಿಪ್ರಸಾದ್ ಹೇಳಿಕೆ ಬಗ್ಗೆ ಅವರೆ ಹೇಳಿಕೊಂಡಿರುವಂತೆ ಮಾಹಿತಿ ಇರಬಹುದು, ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ವಿಚಾರಣೆ ಮಾಡಿದರೆ ಮುಂದಾಗುವ ಅನಾಹುತದ ಬಗ್ಗೆ ಮಾಹಿತಿ ಸಿಗಬಹುದು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.
ಬಿಜೆಪಿ ಮುಖಂಡರಾದ ಸಿ.ಟಿ.ಮಂಜುನಾಥ್,ಎಸ್ ಶಿವಕುಮಾರ್ ಆರಾಧ್ಯ,ಪ್ರಸನ್ನ ಕುಮಾರ್, ಆನಂದ್,ಹೊಸಹಳ್ಳಿ ಶಿವು, ಎಚ್ ಕೆ ಮಂಜುನಾಥ್ ದೂರು ನೀಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು